ಪೊನ್ನಂಪೇಟೆ, ಜು. 5: ಪ್ರತಿ ಯೊಬ್ಬರೂ ಜೀವನದಲ್ಲಿ ಕಾನೂನನ್ನು ಗೌರವಿಸಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅಗತ್ಯವೆಂದು ಪೊನ್ನಂಪೇಟೆ ನ್ಯಾಯಾಧೀಶ ಮೋಹನ್ ಗೌಡ ಹೇಳಿದ್ದಾರೆ. ಶ್ರೀ ರಾಮಕೃಷ್ಣ ಶಾರದಾಶ್ರಮ ಪೊನ್ನಂಪೇಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆ ವÀಹಿಸಿದ್ದ ಎಂ.ಜಿ. ರಾಕೇಶ್ ಅವರು ಕಾನೂನಿಗೆ ಪ್ರತಿಯೊಬ್ಬರೂ ಗೌರವಿಸಬೇಕೆಂದು ಹೇಳಿದರು. ಸಂಪನ್ಮೂಲ ವ್ಯಕ್ತಿ ವಕೀಲೆ ಬಿ.ಯು. ಪ್ರತಿಷ್ಟ ಬಾಲ್ಯ ವಿವಾಹ, ಜನನ ಮತ್ತು ಮರಣ ಕಾಯ್ದೆಯ ಬಗ್ಗೆ ಮಾಹಿತಿ ನೀಡಿದರು. ಮತ್ತೋರ್ವ ಸಂಪನ್ಮೂಲ ವ್ಯಕ್ತಿ ವಕೀಲೆ ಸಿ.ಬಿ. ಅನಿತ ಕೌಟುಂಬಿಕ ದೌರ್ಜನ್ಯ ಕಾಯ್ದೆ 2005 ರ ಬಗ್ಗೆ ಮಾಹಿತಿ ನೀಡಿದರು. ವಕೀಲ ಬಿ.ಎಂ. ಅಯ್ಯಪ್ಪ ಮಾನವನ ಹಕ್ಕುಗಳ ಬಗ್ಗೆ ಮಾಹಿತಿ ನೀಡಿದರು.ತಿತಿಮತಿ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಕೆ.ಬಿ. ಸಂಜೀವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಂಚಾಯಿತಿ ಅಧ್ಯಕ್ಷ ಹೆಚ್.ಇ. ಶಿವಕುಮಾರ್, ಸ್ತ್ರೀ ಶಕ್ತಿ ಒಕ್ಕೂಟದ ತಾಲೂಕು ಅಧ್ಯಕ್ಷೆ ರಜನಿ, ರಾಮಕೃಷ್ಣ ಶಾರದಾಶ್ರಮದ ಸ್ವಾಮೀಜಿ ಗೀತಸಾರನಾಥ, ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷ ಎಸ್.ಡಿ. ಕಾವೇರಪ್ಪ ಮತ್ತು ಆಡಳಿತ ಮಂಡಳಿ ಸದಸ್ಯ ವಕೀಲ ಮತ್ರಂಡ ಅಪ್ಪಚ್ಚು, ಸಾರ್ವಜನಿಕರು ಭಾಗವಹಿಸಿದ್ದರು.