ಮಡಿಕೇರಿ, ಜು. 7: ಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಆರೋಪಿಗೆ ಗಲ್ಲು ಶಿಕ್ಷೆ ಕೋರಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಮಧ್ಯಪ್ರದೇಶದ ಸರಸ್ವತಿ ಶಿಕ್ಷಾ ಮಂದಿರದಲ್ಲಿ ಮೂರನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಡಿಕೇರಿ ಶಾಖಾ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಮೌನ ಮೆರವಣಿಗೆ ಮೂಲಕ ತೆರಳಿ ಮನವಿ ಸಲ್ಲಿಸಲಾಯಿತು.

ಆರೋಪಿಯ ಕುರಿತು ಸೂಕ್ತ ತನಿಖೆ ನಡೆಸಿ, ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಹಾಗೂ ಸರಕಾರ ಬಾಲಕಿಯ ಕುಟುಂಬದವರಿಗೆ ಪರಿಹಾರ ಘೋಷಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಿದರು.

ಈ ಸಂದರ್ಭ ದಮಯಂತಿ, ಪೂಜಾ ಹಾಗೂ ರಾಜೇಶ್ ಇತರರಿದ್ದರು.