ಮೂರ್ನಾಡು, ಜು. 7: ಕೊಡಗಿನ ಪ್ರಕೃತಿದತ್ತವಾದ ನಿರ್ಮಲ ಪರಿಸರವನ್ನು ಉಳಿಸಿಕೊಳ್ಳುವ ಪ್ರಯತ್ನ ಎಲ್ಲರಿಂದಲೂ ಆಗಬೇಕು ಎಂದು ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಮಾದಪ್ಪ ತಿಳಿಸಿದರು.

ಮೂರ್ನಾಡು ಪದವಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಮನೆಯಿಂದಲೇ ಸ್ವಚ್ಛತೆಯನ್ನು ಪ್ರಾರಂಭಿಸಿದಾಗ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಕ್ಲೀನ್ ಇಂಡಿಯಾ ಬ್ರಿಗೇಡ್ ತಂಡದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು. ಜಿಲ್ಲೆಯ ವಿವಿಧೆಡೆ ಸ್ವಚ್ಛತೆಯ ಕಾರ್ಯಕ್ರಮ ಕೈಗೊಳ್ಳಲು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಸಹಕಾರವಿರುತ್ತದೆ ಎಂದು ಹೇಳಿದರು.

ಸಮಾರಂಭದಲ್ಲಿ ಕ್ಲೀನ್ ಇಂಡಿಯಾ ಬ್ರಿಗೇಡ್‍ನ ನಿರ್ದೇಶಕ ನಂದೇಟಿರ ರಾಜ ಮಾದಪ್ಪ, ಕಾರ್ಯದರ್ಶಿ ಚೌರೀರ ಪೆಮ್ಮಯ್ಯ, ಖಜಾಂಚಿ ಬಡುವಂಡ ಸುಬ್ರಮಣಿ, ನಿರ್ದೇಶಕಿ ತೇಲಪಂಡ ಶೈಲಾ ಎನ್.ಎನ್.ಎಸ್. ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ ಆತ್ಮವಿಶ್ವಾಸವನ್ನು ಬೆಳೆಸುವ ವೇದಿಕೆಯಾಗಿದ್ದು, ಇಲ್ಲಿ ಪಾಲ್ಗೊಳ್ಳುವವರ ವ್ಯಕ್ತಿತ್ವ ನಿರ್ಮಾಣವಾಗುತ್ತದೆ ಎಂದು ಹೇಳಿದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ಜನರಲ್ ಕೆ.ಎಸ್. ತಿಮ್ಮಯ್ಯ ಕ್ರೀಡಾ ಅಕಾಡೆಮಿಯ ನಿರ್ದೇಶಕ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಿರ್ದೇಶಕ ಈರಮಂಡ ಸೋಮಣ್ಣ, ಎನ್.ಎಸ್.ಎಸ್ ಯೋಜನಾಧಿಕಾರಿ ಹರ್ಷ ಮಂದಣ್ಣ ಉಪಸ್ಥಿತರಿದ್ದರು.