ಸೋಮವಾರಪೇಟೆ, ಜು. 6: ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಬಸವೇಶ್ವರ ದೇವಾಲಯದಲ್ಲಿ ನಾಗಪ್ರತಿಷ್ಠಾಪನಾ ಮಹೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು. ದೇವಾಲಯ ಸಮಿತಿ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಸಕಲೇಶಪುರದ ಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ವಿವಿಧ ಪೂಜಾ ವಿಧಿವಿಧಾನಗಳು ನಡೆದು, ಶುಭ ಮುಹೂರ್ತದಲ್ಲಿ ನಾಗದೇವರ ವಿಗ್ರಹವನ್ನು ಪ್ರತಿಷ್ಠಾಪಿಸಿ ವಿವಿಧ ಅಭಿಷೇಕಗಳನ್ನು ನೆರವೇರಿಸಲಾಯಿತು.