ಮಡಿಕೇರಿ, ಜು. 7: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ (ಎನ್‍ಪಿಆರ್‍ಪಿಡಿ) ತಾಲೂಕಿನಾದ್ಯಂತ ಕೆಲಸ ನಿರ್ವಹಿಸಲು ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಒಂದು ಹುದ್ದೆ ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಮಾಸಿಕ ಗೌರವಧನ ರೂ.6 ಸಾವಿರ ನೀಡಲಾಗುವದು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಅಭ್ಯರ್ಥಿಯು ವಿಕಲಚೇತನರಾಗಿದ್ದು, ವಿಕಲಚೇತನತೆಯ ಸ್ವರೂಪ ಶೇ. 40 ಕ್ಕಿಂತ ಮೇಲ್ಪಟ್ಟು ಶೇ. 75 ಕ್ಕಿಂತ ಕಡಿಮೆಯಿರಬೇಕು. 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು.

ನಗರಸಭೆ ಮಡಿಕೇರಿಯಲ್ಲಿ ಹಾಗೂ 3 ಪಟ್ಟಣ ಪಂಚಾಯಿತಿಗಳಾದ ಸೋಮವಾರಪೇಟೆ, ಕುಶಾಲನಗರ ಮತ್ತು ವೀರಾಜಪೇಟೆಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಒಂದು ಹುದ್ದೆ ಭರ್ತಿ ಮಾಡಲು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿಕಲಚೇತನರು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ ಮಡಿಕೇರಿ. ಇಲ್ಲಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಆಗಸ್ಟ್ 4 ರೊಳಗೆ ತಲಪುವಂತೆ ಕಳುಹಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ; 08272-222830 ಅನ್ನು ಸಂಪಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.