ಮಡಿಕೇರಿ, ಜು. 6 : ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾದ ರೇಷ್ಮೆ ಮಂಡಳಿ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಮೂಡಾ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್ ಕೊಡಗಿನ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲವರ್ಧಿಸುವ ಕುರಿತು ಚರ್ಚಿಸಲಾಯಿತು ಎಂದು ಟಿ.ಪಿ.ರಮೇಶ್ ತಿಳಿಸಿದ್ದಾರೆ.