ಹಿಂದೂ ಜನಜಾಗೃತಿ ಸಮಿತಿಯಿಂದ ಸರ್ಕಾರಕ್ಕೆ ಮನವಿ
ಸೋಮವಾರಪೇಟೆ, ಜು. 6: ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಕೆಲ ಅಮಾಯಕ ಯುವಕರನ್ನು ಸಿಲುಕಿಸಿರುವ ವಿಶೇಷ ತನಿಖಾ ದಳ, ಅವರಿಗೆ ಚಿತ್ರಹಿಂಸೆ ನೀಡುತ್ತಾ ಬಲವಂತವಾಗಿ ಹೇಳಿಕೆ ಪಡೆಯುತ್ತಿರುವದು ಖಂಡನೀಯ ಎಂದು ಹಿಂದೂ ಜನ ಜಾಗೃತಿ ಸಮಿತಿ ಅಭಿಪ್ರಾಯಿಸಿದ್ದು, ಅಮಾಯಕರನ್ನು ಬಲಿಪಶು ಮಾಡುವ ಕ್ರಮವನ್ನು ತಕ್ಷಣ ನಿಲ್ಲಿಸಬೇಕೆಂದು ಆಗ್ರಹಿಸಿದೆ.
ವಿಚಾರಣೆ ನೆಪದಲ್ಲಿ ಯುವಕರನ್ನು ವಶಕ್ಕೆ ಪಡೆದು ಅವರನ್ನು ಬೆದರಿಸಿ ಖಾಲಿ ಹಾಳೆಗಳ ಮೇಲೆ ಸಹಿ ಮಾಡಿಸಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸಂವಿಧಾನಾತ್ಮಕ ಹಕ್ಕುಗಳಿಂದ ವಂಚಿಸಲಾಗುತ್ತಿದೆ. ಆರೋಪಿಗಳಿಗೆ ಕಾನೂನು ಸಹಾಯ ನೀಡದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಲಾಗುತ್ತಿದ್ದು, ತಕ್ಷಣ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರು ಈ ಬಗ್ಗೆ ಗಮನಹರಿಸಬೇಕೆಂದು ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅಮಾಯಕರನ್ನು ಸಿಲುಕಿಸಿ ರಾಜಕೀಯ ಷಡ್ಯಂತ್ರ ನಡೆಸಲಾಗುತ್ತಿದೆ. ಕಾಣದ ಕೈಗಳು ತನಿಖಾ ಸಂಸ್ಥೆಯನ್ನು ನಿಯಂತ್ರಿಸುತ್ತಿವೆ. ರಾಜ್ಯದಲ್ಲಿ ಬಿಜೆಪಿ, ಆರ್‍ಎಸ್‍ಎಸ್ ಸೇರಿದಂತೆ ಹಿಂದೂಪರ ಸಂಘಟನೆಗಳ 25ಕ್ಕೂ ಅಧಿಕ ಮಂದಿಯನ್ನು ವೈಚಾರಿಕ ಭಿನ್ನಾಭಿಪ್ರಾಯದಿಂದ ಹತ್ಯೆಗೈಯಲಾಗಿದೆ. ಗೌರಿ ಲಂಕೇಶ್ ಪ್ರಕರಣದಲ್ಲಿ ನಕ್ಸಲರ ಕೈವಾಡದ ಸಂಶಯವಿದ್ದರೂ ಸಹ, ಉದ್ದೇಶಪೂರ್ವಕವಾಗಿ ಹಿಂದುತ್ವವಾದಿ ಸಂಘಟನೆಗಳ ಮೇಲೆ
ಉಲ್ಲಂಘಿಸಲಾಗುತ್ತಿದ್ದು, ತಕ್ಷಣ ರಾಜ್ಯ ಸರ್ಕಾರ ಹಾಗೂ ರಾಜ್ಯಪಾಲರು ಈ ಬಗ್ಗೆ ಗಮನಹರಿಸಬೇಕೆಂದು ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅಮಾಯಕರನ್ನು ಸಿಲುಕಿಸಿ ರಾಜಕೀಯ ಷಡ್ಯಂತ್ರ ನಡೆಸಲಾಗುತ್ತಿದೆ. ಕಾಣದ ಕೈಗಳು ತನಿಖಾ ಸಂಸ್ಥೆಯನ್ನು ನಿಯಂತ್ರಿಸುತ್ತಿವೆ. ರಾಜ್ಯದಲ್ಲಿ ಬಿಜೆಪಿ, ಆರ್‍ಎಸ್‍ಎಸ್ ಸೇರಿದಂತೆ ಹಿಂದೂಪರ ಸಂಘಟನೆಗಳ 25ಕ್ಕೂ ಅಧಿಕ ಮಂದಿಯನ್ನು ವೈಚಾರಿಕ ಭಿನ್ನಾಭಿಪ್ರಾಯದಿಂದ ಹತ್ಯೆಗೈಯಲಾಗಿದೆ. ಗೌರಿ ಲಂಕೇಶ್ ಪ್ರಕರಣದಲ್ಲಿ ನಕ್ಸಲರ ಕೈವಾಡದ ಸಂಶಯವಿದ್ದರೂ ಸಹ, ಉದ್ದೇಶಪೂರ್ವಕವಾಗಿ ಹಿಂದುತ್ವವಾದಿ ಸಂಘಟನೆಗಳ ಮೇಲೆ ಕಟ್ಟಲಾಗುತ್ತಿದೆ ಎಂದು ಸಮಿತಿಯ ಸಂತೋಷ್ ರೈ ಆಪಾದಿಸಿದರು.
ಗೌರಿ ಲಂಕೇಶ್ ಮತ್ತು ನಕ್ಸಲರ ನಡುವಿನ ಸಂಬಂಧದ ಬಗ್ಗೆ ತನಿಖೆಯಾಗಬೇಕು. ರಾಜಕೀಯ ಲಾಭಕ್ಕಾಗಿ ಹಿಂದೂಪರ ಸಂಘಟನೆಗಳ ಅಮಾಯಕರನ್ನು ಬಲಿಪಶು ಮಾಡುವದನ್ನು ನಿಲ್ಲಿಸಬೇಕೆಂದು ತಾಲೂಕು ಶಿರಸ್ತೇದಾರ್ ಶಶಿಧರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಸಮಿತಿಯ ಪಿ. ಮಧು, ರಮೇಶ್, ಗಣೇಶ್‍ಕುಮಾರ್, ಲಕ್ಷ್ಮೀಶ್, ನಳಿನಿ ಗಣೇಶ್ ಅವರುಗಳು ಉಪಸ್ಥಿತರಿದ್ದರು.