ಮಡಿಕೇರಿ, ಜು. 6: ಕೊಡಗು ಯೋಧಾಭಿಮಾನಿ ಬಳಗ ವತಿಯಿಂದ ಮಡಿಕೇರಿ ಕೊಡವ ಸಮಾಜ ಸಹಯೋಗದಲ್ಲಿ ‘ಯಾರಿಗಾಗಿ ನಮ್ಮವರ ಬಲಿದಾನ’ ಯೋಧನಮನ ಕಾರ್ಯಕ್ರಮ ತಾ. 8ರಂದು ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಲಿದೆ.
ದೇಶರಕ್ಷಣೆಯಲ್ಲಿ ಯುದ್ಧ ಮುಂತಾದ ಹೋರಾಟದಲ್ಲಿ ಪ್ರಾಣ ಪಣಕ್ಕಿಟ್ಟು ಹೋರಾಡಿದ ವೀರ ಸೈನಿಕರನ್ನು ಸ್ಮರಿಸುವ ಸಲುವಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ಅಧ್ಯಕ್ಷ ಕರ್ನಲ್(ನಿ) ಕಂಡ್ರತಂಡ ಸಿ. ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ವೀರಚಕ್ರ ಪುರಸ್ಕøತ ಮೇಜರ್ ಜನರಲ್ ಕುಪ್ಪಂಡ ಪಿ. ನಂಜಪ್ಪ, ಕೊಡಗು ಎಸ್ಪಿ ರಾಜೇಂದ್ರ ಪ್ರಸಾದ್ ಪಾಲ್ಗೊಳ್ಳಲಿದ್ದಾರೆ. ಆಧ್ಯಾತ್ಮಿಕ ಚಿಂತಕ, ವಾಗ್ಮಿ ಶ್ರೀಕೃಷ್ಣ ಉಪಾಧ್ಯಾಯ, ಸಾಮಾಜಿಕ ಚಿಂತಕ ಅರ್ಜುನ್ ದೇವಾಲದಕೆರೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲೆಯ ಎಲ್ಲಾ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಹಾಗೂ ಸದಸ್ಯರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿ ದ್ದಾರೆಂದು ಯೋಧಾಭಿಮಾನಿ ಬಳಗದ ಪ್ರಕಟಣೆ ತಿಳಿಸಿದೆ.