ಮಡಿಕೇರಿ, ಜು. 7: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2002 ರಿಂದ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊಂಡ “ಸಾಂತ್ವಾನ ಮಹಿಳಾ ಸಹಾಯವಾಣಿ” ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ. ಸಾಂತ್ವಾನ ಕೇಂದ್ರದಲ್ಲಿ ಈವರೆಗೆ 3330 ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, 3300 ಪ್ರಕರಣಗಳು ಇತ್ಯರ್ಥಗೊಂಡು ಉಳಿದ 17 ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತವೆ.

ಈವರೆಗೆ ವಿವಿಧ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 8.59 ಲಕ್ಷ ರೂ.ಗಳನ್ನು ಸಾಂತ್ವನ ಕೇಂದ್ರ ಹಾಗೂ ನ್ಯಾಯಾಲಯದ ಮೂಲಕ 7 ಫಲಾನುಭವಿಗಳಿಗೆ 2018-19ನೇ ಸಾಲಿನಲ್ಲಿ ಕೊಡಿಸಿಕೊಡಲಾಗಿದೆ. ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವಾನ ಕೇಂದ್ರದ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಯವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ -1091 [ಕೊಡಗಿನೊಳಗಿಂದ ಬಿ.ಎಸ್.ಎನ್.ಎಲ್. ಸ್ಥಿರ ದೂರವಾಣಿ ಉಚಿತ ಕರೆ, 08272-229004 ಸಂಪರ್ಕಿಸಬಹುದಾಗಿದೆ.