ಮಡಿಕೇರಿ, ಜು. 6: ಭಾರತ ಸರ್ಕಾರದ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯದ ಕೊಡಗು ಜಿಲ್ಲಾ ನೆಹರು ಯುವ ಕೇಂದ್ರವು 2017-18ನೇ ಸಾಲಿನ ಜಿಲ್ಲಾ ಯುವ ಸಂಘ ಪ್ರಶಸ್ತಿಗೆ ಅರ್ಜಿ ಅಹ್ವಾನಿಸಿದೆ.

ಸಂಘ-ಸಂಸ್ಥೆಗಳ ನೋಂದಣಿ ಅಧಿನಿಯಮ 1960ರ ಪ್ರಕಾರ ನೋಂದಾವಣೆಯಾಗಿ, ನೆಹರು ಯುವ ಕೇಂದ್ರದಲ್ಲಿ ಮಾನ್ಯತೆ ಪಡೆದು ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕøತಿಕವಾಗಿ ಕ್ರಿಯಾತ್ಮಕವಾದ ಚಟುವಟಿಕೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಸಮುದಾಯಿಕ, ಗ್ರಾಮದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ಸೇವೆ ಸಲ್ಲಿಸಿರುವ ಗ್ರಾಮೀಣ ಯುವಕ ಸಂಘ, ಯುವತಿ ಮಂಡಳಿಯನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ “ಯುವ ಸಂಘ ಪ್ರಶಸ್ತಿ” ನೀಡಲಾಗುವದು. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಸಂಘ/ಮಂಡಳಿ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುತ್ತದೆ.

ಏಪ್ರಿಲ್ 1, 2017 ರಿಂದ ಮಾರ್ಚ್ 31, 2018 ರ ಅವಧಿಯಲ್ಲಿ ಸಮುದಾಯದ ಬೆಳವಣಿಗೆಗೆ ಸಲ್ಲಿsಸಿರುವ ಸ್ವಯಂ ಸೇವಾ ಕಾರ್ಯಗಳ ದೃಢೀಕರಣ ಪತ್ರಗಳು, ಭಾವಚಿತ್ರ ಮತ್ತಿತರ ವಿವರಗಳೊಂದಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಯುವಜನ ಸಮನ್ವಯಾಧಿಕಾರಿಗಳ ಕಾರ್ಯಾಲಯ ನೆಹರು ಯುವ ಕೇಂದ್ರ, ಯಶುನಿಲಯ, ಬ್ಲಾಕ್ ನಂ: 8, ಕಾವೇರಿ ಲೇಔಟ್, ಮಡಿಕೇರಿ, ಕಾರ್ಯಾಲಯದ ಕೆಲಸದ ವೇಳೆಯಲ್ಲಿ ಪಡೆದು. ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ ಆಗಸ್ಟ್ 10 ರೊಳಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ:08272-225470 ನ್ನು ಸಂಪರ್ಕಿಸಲು ತಿಳಿಸಿದೆ.