ಮಡಿಕೇರಿ, ಜು. 7: ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ತಾ. 14 ರಂದು ಬೆಳಿಗ್ಗೆ 10 ಗಂಟೆಯಿಂದ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ಅದಾಲತ್‍ನಲ್ಲಿ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗುವಂತಹ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವದು.

ಹೆಚ್ಚಿನ ಮಾಹಿತಿಗೆ ಸಮೀಪದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು.