ಮಡಿಕೇರಿ, ಜು. 8: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಇದೇ ತಾ. 11 ರಂದು ಅಧಿಕಾರ ಸ್ವೀಕಾರ ಮಾಡಲಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 300ಕ್ಕೂ ಅಧಿಕ ಸಂಖ್ಯೆಯಲ್ಲಿ ಕಾಂಗ್ರೆಸ್ ನಾಯಕರುಗಳು, ಜನಪ್ರತಿನಿಧಿಗಳು, ಕಾರ್ಯಕರ್ತರುಗಳು ಭಾಗವಹಿಸಲಿದ್ದಾರೆಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಂ.ಬಿ. ಶಿವು ಮಾದಪ್ಪ ತಿಳಿಸಿದ್ದಾರೆ.
ಪಕ್ಷದ ನಾಯಕರುಗಳಾದ ಡಾ. ಪರಮೇಶ್ವರ್, ಕೆ.ಸಿ. ವೇಣುಗೋಪಾಲ್, ಸಿದ್ದರಾಮಯ್ಯ ಹಾಗೂ ಮೊದಲಾದವರು ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಕೊಡಗಿನಿಂದ ಹೆಚ್ಚಿನ ಕಾರ್ಯಕರ್ತರು ಭಾಗವಹಿಸುವ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ದಿನೇಶ್ ಗುಂಡೂರಾವ್ ಅವರಿಗೆ ಶಕ್ತಿ ನೀಡಿದಂತೆ ಎಂದು ಶಿವು ಮಾದಪ್ಪ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ.