ನಾಪೆÇೀಕ್ಲು: ಪ್ರತಿಯೊಬ್ಬ ವಾಹನ ಚಾಲಕ, ಮಾಲೀಕರು ಸಂಚಾರ ನಿರ್ವಹಣೆ ಮತ್ತು ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ನಾಪೆÇೀಕ್ಲು ಪೆÇಲೀಸ್ ಠಾಣಾಧಿಕಾರಿ ಎಂ. ನಂಜುಂಡ ಸ್ವಾಮಿ ಮನವಿ ಮಾಡಿದರು.
ಕೊಡಗು ಜಿಲ್ಲಾ ಪೆÇಲೀಸ್ ಉಪವಿಭಾಗ ಮಡಿಕೇರಿ ಮತ್ತು ನಾಪೆÉÇೀಕ್ಲು ಪ್ರೌಢಶಾಲೆ ವತಿಯಿಂದ ಸಂಚಾರ ನಿರ್ವಹಣೆ ಮತ್ತು ರಸ್ತೆ ಸಂಚಾರ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಂಚಾರ ನಿಯಮ ಪಾಲಿಸುವದರಿಂದ ಅಪಘಾತಗಳ ಸಂಖ್ಯೆ ಕಡಿಯಾಗುವದಲ್ಲದೆ, ಪೆÇಲೀಸ್ ಇಲಾಖೆಗೂ ಸಹಾಯವಾಗಲಿದೆ. ವಾಹನ ಚಾಲಿಸುವವರು ಕಡ್ಡಾಯವಾಗಿ ವಾಹನಗಳ ದಾಖಲಾತಿ ಮತ್ತು ಚಾಲನಾ ಪರವಾನಗಿಯನ್ನು ಹೊಂದಿರಬೇಕು. ಇತ್ತೀಚಿನ ದಿನಗಳಲ್ಲಿ ಮಕ್ಕಳು ಸಹ ಪರವಾನಗಿ ಇಲ್ಲದೆ, ಸರಿಯಾಗಿ ನಿಯಮ ಪಾಲಿಸದೇ ವಾಹನ ಚಾಲನೆ ಮಾಡುತ್ತಿದ್ದು, ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವದು ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲೆ ಪಿ.ಕೆ. ನಳಿನಿ, ಶಿಕ್ಷಕ ಸದಾನಂದ, ಶಿಕ್ಷಕಿಯರಾದ ಉಷಾರಾಣಿ, ಅಶ್ವಿನಿ ಇದ್ದರು.ಸೋಮವಾರಪೇಟೆ: ವಾಹನ ಚಾಲಕರು ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕೆಂದು ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ ಕರೆ ನೀಡಿದರು.
ಜಿಲ್ಲಾ ಪೊಲೀಸ್ ಮತ್ತು ಸೋಮವಾರಪೇಟೆ ಪೊಲೀಸ್ ಠಾಣೆ ಹಾಗೂ ಸೋಮವಾರಪೇಟೆ ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನ ಸಾಮಾಜಿಕ ಜವಾಬ್ದಾರಿ ಘಟಕದ ವತಿಯಿಂದ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ದೇಶದ ಭಾವಿ ಪ್ರಜೆಗಳಾಗಿ ರೂಪುಗೊಳ್ಳುತ್ತಿರುವ ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಹೊಂದಬೇಕು. 18 ವರ್ಷಕ್ಕಿಂತ ಒಳಪಟ್ಟವರು ವಾಹನ ಚಾಲನೆ ಮಾಡಬಾರದು. ಅತೀವೇಗ ಮತ್ತು ಅಜಾಗರೂಕತೆಯ ಚಾಲನೆಯಿಂದ ಅನೇಕ ಅವಘಡಗಳು ಸಂಭವಿಸುತ್ತಿವೆ. ವಾಹನ ಚಾಲನೆ ಸಂದರ್ಭ ಸೂಕ್ತ ದಾಖಲಾತಿಗಳನ್ನು ಹೊಂದಿರಬೇಕು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹೆಚ್.ಎಸ್. ಶರಣ್ ಮಾತನಾಡಿ, ವಾಹನ ಸವಾರರೊಂದಿಗೆ ಪಾದಚಾರಿಗಳೂ ಕೂಡಾ ರಸ್ತೆ ನಿಯಮ ಪಾಲಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪ ನಿರೀಕ್ಷಕರಾದ ಶಿವಣ್ಣ, ಬಿ.ಟಿ.ಸಿ.ಜಿ. ಪದವಿಪೂರ್ವ ಕಾಲೇಜಿನ ಆಡಳಿತಾಧಿಕಾರಿ ಯೋಗೇಶ್ ಜಿ.ಕೆ., ಉಪನ್ಯಾಸಕರುಗಳಾದ ಎನ್.ಕೆ. ಮನು, ಎಸ್. ಕುಮಾರ, ಬಿ.ಎ. ತುಳಸಿ, ಭವ್ಯ, ಬಿ. ನಮಿತ, ಕಾವ್ಯ ಉಪಸ್ಥಿತರಿದ್ದರು.
ಸೋಮವಾರಪೇಟೆ ಪೊಲೀಸ್ ಠಾಣೆಯ ವತಿಯಿಂದ ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳು ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ಕರಪತ್ರ ವಿತರಿಸಲಾಯಿತು. ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿನಿಯರಾದ ವಿಂದ್ಯಾ ಸ್ವಾಗತಿಸಿ, ಚಿತ್ರ ವಂದಿಸಿದರು. ಸಿಂಪಾನ ಕಾರ್ಯಕ್ರಮ ನಿರ್ವಹಿಸಿದರು.ಸುಂಟಿಕೊಪ್ಪ: ವಾಹನ ಚಾಲನೆಯ ನಿಯಮಗಳನ್ನು ಚಾಲಕರು ಕಡ್ಡಾಯವಾಗಿ ಪಾಲಿಸಿದರೆ ಮುಂದೆ ಸಂಭವಿಸಬಹುದಾದ ಅನಾಹುತವನ್ನು ತಡೆಗಟ್ಟಬಹುದು ಎಂದು ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಂ ಹೇಳಿದರು.
ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷಾ ಮಾಸಾಚರಣೆ ಬಗ್ಗೆ ವಾಹನ ಚಾಲಕರು ಹಾಗೂ ಆಟೋ ಚಾಲಕರಿಗೆ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ವಾಹನ ನಿರ್ವಹಣೆ ಚಾಲನೆಯ ಮಾನದಂಡವನ್ನು ಆರಿತುಕೊಳ್ಳುವದಲ್ಲದೆ ವಾಹನಗಳಿಗೆ ಸಂಬಂಧಿಸಿದ 6 ದಾಖಲೆಗಳನ್ನು ಚಾಲಕರು ಕಡ್ಡಾಯವಾಗಿ ಹೊಂದಿರಬೇಕು ಎಂದರು.
ಸುಂಟಿಕೊಪ್ಪ ಠಾಣೆಯ ಎಎಸ್ಐ ಕಾವೇರಪ್ಪ, ಪೊಲೀಸ್ ಸಿಬ್ಬಂದಿಗಳು, ಆಟೋ ಚಾಲಕರು ಮತ್ತು ವಾಹನ ಚಾಲಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.