ಮಡಿಕೇರಿ, ಜು. 8: ನಗರದ ಖಾಸಗಿ ಬಸ್ ನಿಲ್ದಾಣ ಸಮೀಪ ವಿಜಯ ಬ್ಯಾಂಕ್ ಬಳಿಯ ಮೊಬೈಲ್ ಅಂಗಡಿಯೊಂದರಲ್ಲಿ ಮಸೂದ್ ಅಹ್ಮದ್ (40) ಎಂಬಾತ ಅಪ್ರಾಪ್ತೆಯೊಬ್ಬಳಿಗೆ ಲೈಂಗಿಕ ಕಿರುಕುಳದೊಂದಿಗೆ ನಿಂದಿಸಿರುವ ಕುರಿತು ನಗರ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಡಿವೈಎಸ್‍ಪಿ ಸುಂದರರಾಜ್ ನೇತೃತ್ವದಲ್ಲಿ ನಗರ ಠಾಣಾಧಿಕಾರಿ ಷಣ್ಮುಖಪ್ಪ ಹಾಗೂ ಸಿಬ್ಬಂದಿ ಯುವತಿ ನೀಡಿದ ದೂರಿನ ಮೇರೆಗೆ ಕ್ರಮ ಜರುಗಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ