ಮಡಿಕೇರಿ, ಜು. 8: ಪೊನ್ನಂಪೇಟೆ ಉಪ ನೋಂದಣಾಧಿಕಾರಿಗಳ ಕಚೇರಿಯನ್ನು ಖಾಲಿ ಇರುವ ಆಹಾರ ಮತ್ತು ನಾಗರಿಕ ಇಲಾಖೆಯ ಕಟ್ಟಡಕ್ಕೆ ಸ್ಥಳಾಂತರಗೊಳಿಸುವ ಬಗ್ಗೆ ನಾಗರಿಕ ವೇದಿಕೆ ಮನವಿ ಸಲ್ಲಿಸಿದೆ. ಈ ಬಗ್ಗೆ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲು ಸಂಬಂಧಿಸಿದವರಿಗೆ ಜಿಲ್ಲಾ ನೋಂದಣಿ ಅಧಿಕಾರಿ ಆದೇಶ ಹೊರಡಿಸಿದ್ದಾರೆ.