ನಾಪೋಕ್ಲು, ಜು. 8: ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ತೃತೀಯ ಬಿ.ಕಾಂ ವಿದ್ಯಾರ್ಥಿನಿ ಗಾಯತ್ರಿ ಅತ್ಯಧಿಕ ಅಂಕಗಳಿಸಿ ತೇರ್ಗಡೆ ಹೊಂದಿದ್ದಾಳೆ. ಮಂಗಳೂರು ವಿಶ್ವವಿದ್ಯಾನಿಲಯದ ಬಿ.ಕಾಂ ಪದವಿಯಲ್ಲಿ ಶೇ. 95 ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದು, ಇವಳನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ಹಾಗೂ ಉಪನ್ಯಾಸಕ ವೃಂದ ಪಾಲ್ಗೊಂಡಿದ್ದರು.