ಒಡೆಯನಪುರ, ಜು. 8: ಗೋಪಾಲಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ ಎಸ್‍ಡಿಎಂಸಿ ಅಧ್ಯಕ್ಷ ವಿ.ಎನ್. ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ನಿಡ್ತ ಗ್ರಾ.ಪಂ. ಸದಸ್ಯ ಟಿ.ಕೆ. ಅಶೋಕ್ ಮಾತನಾಡಿ, ಪೋಷಕರು ತಮ್ಮ ಮಕ್ಕಳ ಆರೋಗ್ಯ ಮತ್ತು ಶಿಕ್ಷಣದ ಕಡೆಗೆ ಹೆಚ್ಚಿನ ಗಮನವಹಿಸಬೇಕು. ತಮ್ಮ ಮಕ್ಕಳ ಶಿಕ್ಷಣದ ಪ್ರಗತಿಯತ್ತ ಗಮನವಹಿಸುವದರ ಜೊತೆಯಲ್ಲಿ ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳ ಆಸಕ್ತಿಗಳನ್ನು ಸಹ ಗಮನಿಸಬೇಕಾಗುತ್ತದೆ ಎಂದರು. ಪತ್ರಕರ್ತ ವಿ.ಸಿ. ಸುರೇಶ್ ಮಾತನಾಡಿ, ಸರಕಾರಿ ಶಾಲೆಯಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿರುವ ಮೂಲಕ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಶಿಕ್ಷಣದ ಜೊತೆಯಲ್ಲಿ ಸಂಸ್ಕಾರವನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಹಂಡ್ಲಿ ಕ್ಲಸ್ಟರ್ ಸಿಆರ್‍ಪಿ ಮಧುಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭ ನಿಡ್ತ ಗ್ರಾ.ಪಂ. ಸದಸ್ಯೆ ಸಾವಿತ್ರಮ್ಮ, ಶಾಲಾ ಮುಖ್ಯ ಶಿಕ್ಷಕ ಟಿ.ಕೆ. ಅಪ್ಪಸ್ವಾಮಿ, ಎಸ್‍ಡಿಎಂಸಿ ಉಪಾಧ್ಯಕ್ಷ ರೆಹಮತ್, ಸದಸ್ಯ ರಮೇಶ್ ಮುಂತಾದವರಿದ್ದರು.