ಕೂಡಿಗೆ, ಜು. 10: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನನ್ವಯ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ನವೀನ್‍ಗೌಡ ಮತ್ತು ಸಿಬ್ಬಂದಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಲಕ್ಷ್ಮಿ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಅಕ್ರಮ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.