ಮಡಿಕೇರಿ, ಜು. 11: ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ ಹಾಕಿ ಟರ್ಫ್ ಮೈದಾನ ಮಂಜೂರಾಗಿದ್ದು, ಈವರೆಗೂ ಕಾಮಗಾರಿ ಪೂರ್ಣಗೊಳಿಸದಿರಲು ಕಾರಣವೇನು? ಮತ್ತು ಯಾವಾಗ ಪೂರ್ಣಗೊಳಿಸಲಾಗುವದು ಎಂಬ ಅಪ್ಪಚ್ಚುರಂಜನ್ ಅವರ ಪ್ರಶ್ನೆಗೆ ಕೊಡಗು ಜಿಲ್ಲೆ ಸೋಮವಾರಪೇಟೆಯಲ್ಲಿ ಹಾಕಿ ಟರ್ಫ್ ಮೈದಾನ ಮಂಜೂರಾಗಿದ್ದು ಟೆಂಡರ್ ಪ್ರಕ್ರಿಯೆ ಪರಿಶೀಲನೆಯಲ್ಲಿದ್ದು, ಈ ಕಾಮಗಾರಿಯನ್ನು ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಒಳಗಾಗಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವದು ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ್ ಮಾಹಿತಿ ನೀಡಿದ್ದಾರೆ.