ಮಡಿಕೇರಿ, ಜು. 10: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜುಲೈ 12 ರಂದು ಬೆಳಿಗ್ಗೆ 9.30 ಗಂಟೆಗೆ ಎನ್.ಆರ್.ಎಲ್.ಎಂ ಯ.ಡಿಯಲ್ಲಿನ ಸ್ವ ಸಹಾಯ ಗುಂಪಿನ ಸದಸ್ಯರುಗಳು ಡಿ.ಡಿ.ಯು.ಜಿ.ಕೆ.ವೈ ಹಾಗೂ ಫಲಾನುಭವಿಗಳ ಜೊತೆ ವೀಡಿಯೋ ಸಂವಾದ ಕಾರ್ಯಕ್ರಮ ನಡೆಸಲಿದ್ದಾರೆ.

ಈ ಸಂವಾದ ಕಾರ್ಯಕ್ರಮವು ಜಿಲ್ಲಾ ಮಟ್ಟದಲ್ಲಿ ಎನ್.ಐ.ಸಿ ಕೇಂದ್ರ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಮಟ್ಟದಲ್ಲಿ ತಾ.ಪಂ.ಹಾಗೂ ಗ್ರಾ.ಪಂ.ಗಳಲ್ಲಿ ಆಯೋಜಿಸಲಾಗಿದೆ. ಗ್ರಾ.ಪಂ.ಮಟ್ಟದಲ್ಲಿ ಕಾಮನ್ ಸರ್ವೀಸ್ ಸೆಂಟರ್ ಲಭ್ಯವಿರುವ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ ಹಾಗೂ ಉಳಿದ ಗ್ರಾಮ ಪಂಚಾಯಿತಿಗಳಲ್ಲಿ ಟೆಲಿವಿಷನ್ ಮೂಲಕ ಸಂವಾದ ಕಾರ್ಯಕ್ರಮಕ್ಕೆ ಅವಕಾಶ ಕಲ್ಪಿಸಲಾಗಿದೆ. ತಾಲೂಕು ಮಟ್ಟದಲ್ಲಿ ತಾ.ಪಂ.ಯಲ್ಲಿ ವೆಬ್‍ಮೋಡ್, ಟೆಲಿವಿಷನ್ (ಟಿ.ವಿ) ಮೂಲಕ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಂವಾದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ಭಾಗವಹಿಸುವಂತೆ ಜಿ.ಪಂ.ಯೋಜನಾ ನಿರ್ದೇಶಕರು ಕೋರಿದ್ದಾರೆ.