ಕೂಡಿಗೆ, ಜು. 12: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯ, ಗಣಗೂರು ಜ್ಞಾನವಿಕಾಸ ಕೇಂದ್ರದ ವತಿಯಿಂದ ಗಣಗೂರು ಬಸವೇಶ್ವರ ದೇವಸ್ಥಾನದ ಸುತ್ತಮುತ್ತಲು ಸ್ವಚ್ಛತೆ ಕಾರ್ಯಕ್ರಮ ನಡೆಸಲಾಯಿತು. ಸ್ವಚ್ಛತೆ ಕಾರ್ಯದ ನಂತರ ದೇವಸ್ಥಾನದ ಆವರಣದಲ್ಲಿ ಹೂವಿನ ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಸೇವಾ ಪ್ರತಿನಿಧಿ ಸರೋಜಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಇದ್ದರು.