ಮಡಿಕೇರಿ, ಜು. 12: ಪ್ರಸಕ್ತ ಸಾಲಿನ ತೋಟಗಾರಿಕೆ ಇಲಾಖೆ ಫಲಾನುಭವಿ ಆಧಾರಿತ ವಿವಿಧ ಕಾರ್ಯಕ್ರಮಗಳಡಿ ಅರ್ಹ ರೈತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ರೈತ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಗಳನ್ನು ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ ಪಡೆದು ಪಹಣಿ (ಪ್ರಸಕ್ತ ಸಾಲಿನ) ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಆಧಾರ್ ಪ್ರತಿಗಳೊಂದಿಗೆ ತಾ. 31 ರೊಳಗೆ ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ತಿಳಿಸಿದೆ. ಪ್ರಸಕ್ತ ಸಾಲಿನ ಆರ್ಥಿಕ ಮತ್ತು ಭೌತಿಕ ಗುರಿಗಳು, ವರ್ಗವಾರು ಮೀಸಲಾತಿ ಗುರಿಗಳು, ಸರ್ಕಾರದ ಮಾರ್ಗಸೂಚಿಗಳಿಗೆ ಹಾಗೂ ಲಭ್ಯ ಅನುದಾನಕ್ಕೆ ಅನುಗುಣವಾಗಿ ಅರ್ಹ ರೈತ ಫಲಾನುಭವಿಗಳನ್ನು ಆಯ್ಕೆ ಮಾಡಿ ಕಾರ್ಯದೇಶಗಳನ್ನು ನೀಡಲಾಗುವದು. ನಂತರ ಅರ್ಹ ರೈತರಿಗೆ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಹಾಯಧನ ನೀಡಲಾಗುವದು.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ ಅಡಿ ಕಾಳುಮೆಣಸು ಪ್ರದೇಶ ವಿಸ್ತರಣೆ (ಶೇ. 40), ಸಮಗ್ರ ಪೋಷಕಾಂಶ ಮತ್ತು ಪೀಡೆ ನಿರ್ವಹಣೆ (ಶೇ. 30), ಬಾಳೆ ಪ್ರದೇಶ ವಿಸ್ತರಣೆ (ಶೇ. 40), ಕಿತ್ತಳೆ ಪುನಶ್ಚೇತನ (ಶೇ. 50), ಜೇನು ಪೆಟ್ಟಗೆ, ಕುಟುಂಬ ಮತ್ತು ಸಂಸ್ಕರಣೆ ಉಪಕರಣಗಳಿಗೆ ಸಹಾಯಧನ (ಶೇ. 40), ಸುರಕ್ಷಿತ ಬೇಸಾಯಕ್ಕಾಗಿ ಟ್ಯೂಬ್ ಲಾರ್ ಪಾಲಿಮನೆಗಳಿಗೆ ಮತ್ತು ಪಾಲಿಮನೆಗಳಲ್ಲಿ ತರಕಾರಿ ಮತ್ತು ಹೂ ಬೆಳೆಗಳನ್ನು ಬೆಳೆಯಲು ಸಹಾಯಧನ (ಶೇ. 50), ಪ್ಯಾಕ್ ಹೌಸ್ ನಿರ್ಮಾಣ (ಶೇ. 50), ಹಣ್ಣು ಮಾಗಿಸುವ ಘಟಕ.

ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿ: ರಬ್ಬರ್, ಕಾಫಿ ಮತ್ತು ಟೀ ಬೆಳೆಗಳನ್ನು ಹೊರತುಪಡಿಸಿ ಎಲ್ಲಾ ತೋಟಗಾರಿಕೆ ಬೆಳೆಗಳಲ್ಲಿ ಸೂಕ್ಷ್ಮ ನೀರಾವರಿ ಪದ್ಧತಿ ಅಳವಡಿಸಲು ಎಲ್ಲಾ ವರ್ಗದ ರೈತರಿಗೆ ಶೇ. 90 ರ ದರದಲ್ಲಿ 5 ಎಕರೆವರೆಗೆ ಮತ್ತು ಶೇ. 35 ರದರದಲ್ಲಿ ನಂತರದ 7.5 ಎಕರೆವರೆಗೆ ಒಟ್ಟಾರೆ ಗರಿಷ್ಠ 12.5 ಎಕರೆವರೆಗೆ (ಅಲ್ಪಾವಧಿ ವಾರ್ಷಿಕ ಬೆಳೆಗಳಿಗೆ ಗರಿಷ್ಠ 5 ಎಕರೆ ಮಾತ್ರ) ಸಹಾಯಧನ ನೀಡಲಾಗುವದು.

ಅರ್ಹ ರೈತರು ಯೋಜನೆಗಳಿಗೆ ಸಂಬಂಧಿಸಿದ ತಂತ್ರಾಂಶದಲ್ಲಿ ನೋಂದಾಯಿಸಿಕೊಳ್ಳಲು ಮತ್ತು ಅರ್ಜಿ ನಮೂನೆಗಳನ್ನು ಸಂಬಂಧಿಸಿದ ತಾಲೂಕು ತೋಟಗಾರಿಕೆ ಕಚೇರಿಗಳಲ್ಲಿ ಪಡೆದು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ ತೋಟಗಾರಿಕೆ ಉಪನಿರ್ದೇಶಕರು ಮಡಿಕೇರಿ-08272-228432, ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಮಡಿಕೇರಿ-08272-220555, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ), ಸೋಮವಾರಪೇಟೆ-08276-281364, ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಪೊನ್ನಂಪೇಟೆ-08274-249637 ನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.

ಪ್ರೋತ್ಸಾಹ ಧನಕ್ಕೆ

ಕನ್ನಡ ಪುಸ್ತಕ ಪ್ರಾಧಿಕಾರವು ಪರಿಶಿಷ್ಟ ಜಾತಿ ಸಾಹಿತಿಗಳ ಕೃತಿ ಪ್ರಕಟಣೆಗೆ ತಲಾ ರೂ. 35 ಸಾವಿರ ಪ್ರೋತ್ಸಾಹಧನ ನೀಡುವ ಯೋಜನೆ ರೂಪಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿದಾರರು ಕಡ್ಡಾಯವಾಗಿ ತಮ್ಮ ಆರ್.ಡಿ. ನಂಬರ್ ಇರುವ ಜಾತಿ ಪ್ರಮಾಣ ಪತ್ರದೊಂದಿಗೆ ಎ4 ಸೈಜ್ ಹಾಳೆಯಲ್ಲಿ ಡಿ.ಟಿ.ಪಿ. ಮಾಡಿದ ಕನಿಷ್ಟ 200 ಪುಟಗಳಿರುವ ಕೃತಿಯನ್ನು ಸಲ್ಲಿಸಬಹುದಾಗಿದೆ. ಈಗಾಗಲೇ ಸಾಹಿತ್ಯ ಕೃತಿಗಳು ಪ್ರಕಟವಾಗಿರುವ ಲೇಖಕರೂ ಕೂಡ ಅರ್ಜಿ ಸಲ್ಲಿಸಲು ಅವಕಾಶವಿದೆ. 18 ವರ್ಷ ಮೇಲ್ಪಟ್ಟ ಯಾವದೇ ಲೇಖಕರೂ ಕೂಡ ಅರ್ಜಿ ಸಲ್ಲಿಸಬಹುದು. ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರಿಯು ಸೃಜನಶೀಲ, ಸೃಜನೇತರ ಸಾಹಿತ್ಯವಾಗಿರಬೇಕು. ಅನುವಾದಗಳನ್ನು ಪಠ್ಯ ಪುಸ್ತಕಗಳನ್ನು ಹಾಗೂ ಬೇರಾವದೇ ಪದವಿಗಾಗಿ ಸಿದ್ದಪಡಿಸಿರುವ ಪ್ರಬಂಧಗಳನ್ನು ಪರಿಗಣಿಸಲಾಗುವದಿಲ್ಲ.

ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವದಿಲ್ಲ. ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು ಈ ವಿಳಾಸಕ್ಕೆ ತಾ. 21 ರೊಳಗೆ ಅರ್ಜಿ ಸಲ್ಲಿಸುವದು.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ತಿತಿತಿ.ಞಚಿಟಿಟಿಚಿಜಚಿ ಠಿusಣಚಿಞಚಿಠಿಡಿಚಿಜhiಞಚಿಡಿಚಿ@gmಚಿiಟ.ಛಿom ದೂರವಾಣಿ ಸಂಖ್ಯೆ 080-22484516/ 22017704 ಅನ್ನು ಸಂಪರ್ಕಿಸಬಹುದು.

ಕಚೇರಿ ಸಹಾಯಕರನ್ನು ನೇಮಕ ಮಾಡಲು

ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಇಲ್ಲಿಗೆ ಗೌರವಧನ ಆಧಾರದ ಮೇಲೆ ಕಾರ್ಯಕ್ರಮ ಸಂಯೋಜಕರು ಮತ್ತು ಕಚೇರಿ ಸಹಾಯಕರನ್ನು ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಈ ನೇಮಕಾತಿಯು 2018-19ನೇ ಸಾಲಿಗೆ ತಾತ್ಕಾಲಿಕವಾಗಿದ್ದು, ಫೆಬ್ರವರಿ 28, 2019 ಕ್ಕೆ ಕೊನೆಗೊಳ್ಳುತ್ತದೆ. ಕಾರ್ಯಕ್ರಮ ಸಂಯೋಜಕರ ಹುದ್ದೆಗೆ ಯಾವದಾದರೂ ಒಂದು ಪದವಿ ಪಡೆದಿರಬೇಕು. ಕಂಪ್ಯೂಟರ್ ಬಳಕೆಯಲ್ಲಿ ಪರಿಣತಿ ಹೊಂದಿರಬೇಕು. ಸೃಜನಾತ್ಮಕ ಮತ್ತು ಕ್ರಿಯಾತ್ಮಕ ಚಟುವಟಿಕೆಗಳಾದ ಸಂಗೀತ, ನೃತ್ಯ ಹಾಗೂ ನಾಟಕ ಕ್ಷೇತ್ರದಲ್ಲಿ ಅನುಭವವಿರಬೇಕು. ಗೌರವಧನ ಮಾಸಿಕ ರೂ. 15 ಸಾವಿರ, ಕಚೇರಿ ಸಹಾಯಕರ ಹುದ್ದೆಗೆ ಪಿ.ಯು.ಸಿ. ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಕಂಪ್ಯೂಟರ್ ಬಳಕೆಯಲ್ಲಿ ಪರಿಣತಿ ಹೊಂದಿರಬೇಕು. ಚಿತ್ರಕಲೆ, ನಾಟಕ, ಕರಕುಶಲ ಕಲೆ, ನೃತ್ಯ, ಸಂಗೀತ ಯಾವದಾದರೊಂದು ಕ್ಷೇತ್ರದಲ್ಲಿ ಪರಿಣತಿ ಹೊಂದಿರಬೇಕು.

ಅರ್ಜಿದಾರರು ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ತಾ. 16 ರಂದು ಸಂಜೆ 4 ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಬಳಿ, ಮೈಸೂರು ರಸ್ತೆ, ಮಡಿಕೇರಿ ಇವರಿಗೆ ಎಲ್ಲಾ ವಿದ್ಯಾರ್ಹತೆಯ ದಾಖಲೆಗಳೊಡನೆ ಕಚೇರಿಗೆ ಸಲ್ಲಿಸುವದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಸಂಪರ್ಕಿಸಬಹುದು.