ಮಡಿಕೇರಿ, ಜು. 13 :ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ತಾ. 14 ರಂದು (ಇಂದು) ಬೆಳಿಗ್ಗೆ 10 ಗಂಟೆಯಿಂದ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಈ ಅದಾಲತ್‍ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯಾಗುವಂತಹ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸ ಲಾಗುವದು.

ಹೆಚ್ಚಿನ ಮಾಹಿತಿಗೆ ಸಮೀಪದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಅಥವಾ ತಾಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯ ದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರು ತಿಳಿಸಿದ್ದಾರೆ.