ಮಡಿಕೇರಿ, ಜು. 18: ಕರ್ನಾಟಕ ಜಾನಪದ ಅಕಾಡೆಮಿ ವತಿಯಿಂದ 2016 ರ ಜನವರಿ 1 ರಿಂದ 2016 ರ ಡಿಸೆಂಬರ್ 31 ರವರೆಗೆ ಹಾಗೂ 2017 ರ ಜನವರಿ 1 ರಿಂದ 2017 ರ ಡಿಸೆಂಬರ್ 31 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ ಕನಿಷ್ಟ 150 ಪುಟಗಳ ಮಿತಿಯಲ್ಲಿರುವ ಜನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆ-ಸಂಶೋಧನೆ, ಜನಪದ ಸಂಕೀರ್ಣ ಪ್ರಕಾರಗಳ ಅತ್ಯುತ್ತಮ ಜಾನಪದ ಕೃತಿಗಳನ್ನು ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಲೇಖಕರು/ ಪ್ರಕಾಶಕರು/ ಸಂಪಾದಕರು 4 ಕೃತಿಗಳನ್ನು ದ್ವಿಪ್ರತಿ ಬಿಲ್ಲಿನೊಂದಿಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-560002 ಇವರಿಗೆ ಆಗಸ್ಟ್ 10 ರೊಳಗೆ ಕಳುಹಿಸಿಕೊಡಬೇಕಾಗಿ ಕೋರಲಾಗಿದೆ.