ಮಡಿಕೇರಿ, ಜು. 18: ಕರ್ನಾಟಕ ಲೋಕಾಯುಕ್ತ ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜುಲೈ, 20 ರಂದು ಸೋಮವಾರಪೇಟೆಯ ತಾಲೂಕು ಕಚೇರಿ ಆವರಣದಲ್ಲಿ, ತಾ. 21 ರಂದು ವೀರಾಜಪೇಟೆ ತಾಲೂಕು ಕಚೇರಿ ಆವರಣದಲ್ಲಿ ಮತ್ತು ತಾ. 23 ರಂದು ಮಡಿಕೇರಿಯ ತಾಲೂಕು ಕಚೇರಿ ಆವರಣದಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ.

ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ ಮಡಿಕೇರಿ 08272-220797 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.