ಸೋಮವಾರಪೇಟೆ, ಜು. 19: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೋಮವಾರಪೇಟೆ ವಲಯ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ ಇಲ್ಲಿನ ಮಹಿಳಾ ಸಮಾಜದಲ್ಲಿ ನಡೆಯಿತು.

ಕಾರ್ಯಾಗಾರವನ್ನು ಬಿಟಿಸಿಜಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಶರಣ್ ಉದ್ಘಾಟಿ ಸಿದರು. ಕಾರ್ಯಕ್ರಮದಲ್ಲಿದ್ದ ಯೋಜನಾಧಿಕಾರಿ ವೈ. ಪ್ರಕಾಶ್ ಮಾತನಾಡಿ, ಸ್ಥಳೀಯ ಒಕ್ಕೂಟದ ಎಲ್ಲ ಪದಾಧಿಕಾರಿಗಳ ಸಹಕಾರದಿಂದ ಉತ್ತಮ ಪ್ರಗತಿ ಹೊಂದಿದೆ. 2018-19ನೇ ಸಾಲಿನಲ್ಲಿ ಒಕ್ಕೂಟ ಪ್ರಥಮ ಸ್ಥಾನ ಪಡೆಯಲು ಎಲ್ಲರೂ ಸಹಕರಿಸಬೇಕೆಂದರು.

ಹೆಬ್ಬಾಲೆ ಒಕ್ಕೂಟದ ಮೇಲ್ವಿಚಾರಕ ವಿನೋದ್ ಸಂಸ್ಥೆಯ ಸದಸ್ಯರಿಗೆ ತರಬೇತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಮೇಲ್ವಿಚಾರಕ ಕೆ. ರಮೇಶ್, ಸೇವಾ ಪ್ರತಿನಿಧಿಯಾದ ಹರಿಣಾಕ್ಷಿ, ಬಿ.ಎಸ್. ಶೈಲಾ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.