ಮಡಿಕೇರಿ, ಜು. 28: ಪ್ರಸಕ್ತ (2018-19) ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಭತ್ತ (ಮಳೆಯಾಶ್ರಿತ/ ನೀರಾವರಿ) ಮತ್ತು ಮುಸುಕಿನ ಜೋಳ (ಮಳೆಯಾಶ್ರಿತ) ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಲು ಅವಕಾಶವಿದೆ. ಭತ್ತದ ಬೆಳೆಗೆ ವಿಮೆ ಪಾವತಿಸಲು ತಾ. 14 ಮತ್ತು ಮುಸುಕಿನ ಜೋಳಕ್ಕೆ ಬೆಳೆ ವಿಮೆ ಪಾವತಿಸಲು ತಾ. 31 ಕೊನೆಯ ದಿನವಾಗಿದೆ. ಈ ದಿನಾಂಕದೊಳಗೆ ಬ್ಯಾಂಕಿನಲ್ಲಿ ವಿಮಾ ಪ್ರೀಮಿಯಂ ಮೊತ್ತ ಪಾವತಿಸಿ ನೋಂದಾಯಿಸಿಕೊಳ್ಳಲು ರೈತರಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಮೀಪದ ಬ್ಯಾಂಕ್ ಶಾಖೆ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕ ಶಿವಕುಮಾರ್ ತಿಳಿಸಿದ್ದಾರೆ.