ಶನಿವಾರಸಂತೆ, ಜು. 28: ಶನಿವಾರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಳ್ಳೂರು ಗ್ರಾಮದಲ್ಲಿ ರಸ್ತೆ ಸುರಕ್ಷತಾ ಮಾಸ ಅಂಗವಾಗಿ ಗ್ರಾಮಸ್ಥರಿಗೆ ರಸ್ತೆ ಸುರಕ್ಷತೆಯ ಪ್ರಾಮುಖ್ಯತೆ, ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.

ದ್ವಿಚಕ್ರ ವಾಹನ ಸವಾರರು ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಹಾಗೂ ವಾಹನ ಚಾಲಕರು - ಸಹ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವಂತೆ ಸೂಚಿಸಲಾಯಿತು.

ಅರಿವು ಕಾರ್ಯಕ್ರಮದಲ್ಲಿ ಠಾಣಾಧಿಕಾರಿ ಹೆಚ್.ಎಂ. ಮರಿಸ್ವಾಮಿ, ಸಿಬ್ಬಂದಿಗಳಾದ ವಿ.ಎಂ. ಸಫೀರ್, ಹರೀಶ್, ಚೆನ್ನಕೇಶವ ಪಾಲ್ಗೊಂಡಿದ್ದರು.