ಮಡಿಕೇರಿ, ಜು. 29: ನಾವೀನ್ಯತೆ ಕ್ಷೇತ್ರಕ್ಕೆ 2, ತಾರ್ಕಿಕ 2, ಕಲೆ 2, ಕ್ರೀಡೆ 2, ಸಾಂಸ್ಕøತಿಕ 2, ಸಮಾಜ ಸೇವೆ 2, ಸಂಗೀತ 2 ಈ ಏಳು ವಿಭಾಗದಲ್ಲಿ ತಲಾ ಎರಡರಂತೆ ಒಟ್ಟು 14 ಪ್ರಶಸ್ತಿ ನೀಡಲಾಗುತ್ತದೆ.
ಅಸಾಧಾರಣ ಸಾಧನೆ ಮಾಡಿ ಪ್ರತಿಭೆ ತೋರಿರುವ 5 ರಿಂದ 18 ವರ್ಷದೊಳಗಿನ (ತಾ. 31 ಕ್ಕೆ) ಮಕ್ಕಳನ್ನು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗುವದು. ಈ ಜಿಲ್ಲಾಮಟ್ಟದ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ರೂ. 10 ಸಾವಿರ ನಗದು ಬಹುಮಾನ ಒಳಗೊಂಡಿದೆ.
ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳ ವರಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಯನ್ನು ಗುರುತಿಸಲು ಅವರ ಸಾಧನೆಯ ಬಗ್ಗೆ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು.
ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಈ ಹಿಂದೆ ಯಾವದಾದರೂ ವರ್ಷದಲ್ಲಿ ಅರ್ಜಿ ಪ್ರಶಸ್ತಿಗೆ ಪರಿಗಣಿಸಲ್ಪಟ್ಟಿದ್ದಲ್ಲಿ, ಪುನಃ ಅದನ್ನು ಪರಿಗಣಿಸಲಾಗುವದಿಲ್ಲ.
2018-19ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆ ಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳೊಂದಿಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಸ್ತಾವನೆಯನ್ನು ಸೆಪ್ಟೆಂಬರ್ 30 ರೊಳಗೆ ಉಪನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 08272-298379ನ್ನು ಸಂಪರ್ಕಿಸಬಹುದು.