ಸೋಮವಾರಪೇಟೆ,ಜು.31: ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಲೋಡರ್ಸ್ ಕಾಲೋನಿಯಲ್ಲಿ ನಿನ್ನೆ ಸಂಜೆ ನಡೆದಿದೆ.

ಕಾಲೋನಿಯ ಮಹದೇವ ಮತ್ತು ಮಹಾದೇವಿ ಎಂಬವರ ಪುತ್ರ, ಮಸಗೋಡು ಚೆನ್ನಮ್ಮ ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಸಚಿನ್(15) ಮೃತಪಟ್ಟವನು.

ಶಾಲೆಯಿಂದ ಸಂಜೆ ಮನೆಗೆ ಬಂದ ಸಚಿನ್, ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮವಾರಪೇಟೆ ಪೋಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಇಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.