ಗೋಣಿಕೊಪ್ಪ ವರದಿ, ಆ. 2: ಪೊನ್ನಂಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಪೊನ್ನಂಪೇಟೆ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿ ಗಳು ಹಲವು ಬಗೆಯ ಪ್ರತಿಭೆಯನ್ನು ಅನಾವರಣ ಗೊಳಿಸಿದರು. ತಾಲೂಕು ಪಂಚಾಯಿತಿ ಸದಸ್ಯೆ ಮೂಕಳೇರ ಆಶಾ ಪೂಣಚ್ಚ ಉದ್ಘಾಟಿಸಿ ಮಾತನಾಡಿ, ಪ್ರತೀ ಮಕ್ಕಳು ಈ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಶಿಕ್ಷಕರು ಕ್ರಮಕೈಗೊಳ್ಳಬೇಕು ಎಂದರು.
ವೀರಾಜಪೇಟೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎ. ಲೋಕೇಶ್ ಮಾತನಾಡಿ, ಇದು ಮಹತ್ವದ ಕಾರ್ಯ ಕ್ರಮವಾಗಿದ್ದು ಮಕ್ಕಳ ಸರ್ವತೋ ಮುಖ ಬೆಳವಣಿಗೆಗೆ ಪೂರಕವಾಗಿ ರುವದರಿಂದ ಶಾಲಾ ಹಂತದಲ್ಲಿ ಹೆಚ್ಚು ಮಕ್ಕಳು ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದರು. ಈ ಸಂದರ್ಭ ನಿವೃತ್ತಿಯಾದ ಬಲ್ಯಮುಂಡೂರು ಸ.ಹಿ.ಪ್ರಾ. ಶಾಲೆ ಶಿಕ್ಷಕಿಯರುಗಳಾದ ರತ್ನಕುಮಾರಿ, ಪಿ.ಕೆ. ಚಿಣ್ಣಮ್ಮ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಪಿ. ಡಿ. ರತಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಗ್ಯ, ಪೊನ್ನಂಪೇಟೆ ಗ್ರಾ.ಪಂ. ಅಧ್ಯಕ್ಷ ಮೂಕಳೇರ ಸುಮಿತ ಗಣೇಶ್, ಶಾಲಾ ಹಳೇ ವಿದ್ಯಾರ್ಥಿಗಳ ಸಂಘದ ಸದಸ್ಯ ಜಿಮ್ಮಿ ಅಣ್ಣಮ್ಮ, ದಾನಿಗಳಾದ ರಾಮಕೃಷ್ಣ ಉಪಸ್ಥಿತರಿದ್ದರು.