ಮಡಿಕೇರಿ, ಆ. 2: ಮಡಿಕೇರಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ತಾ. 3 ರಂದು (ಇಂದು) ನೇರ ಸಂದರ್ಶನÀÀವನ್ನು ಆಯೋಜಿಸಲಾಗಿದೆ. ಈ ಸಂದರ್ಶನದಲ್ಲ್ಲಿ ಅogeಟಿಣ ಇ-Seಡಿviಛಿes Pvಣ. ಐಣಜ., ಒಚಿಟಿgಚಿಟoಡಿe, ಸಂಸ್ಥೆಯವರು ಭಾಗವಹಿಸಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮ ಹಾಗೂ ಯಾವದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿರುತ್ತದೆ. ಮಲಯಾಳಂ ಭಾಷೆ ಬಲ್ಲವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವದು. ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು, ಅನುಭವ ಪ್ರಮಾಣಪತ್ರ (ಅನ್ವಯಿಸುವವರಿಗೆ ಮಾತ್ರ) ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ತಾ. 3 ರಂದು ಬೆಳಿಗ್ಗೆ 10 ರಿಂದ 3 ಗಂಟೆವರೆಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು.