ಮಡಿಕೇರಿ, ಆ. 2: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇವರ ವತಿಯಿಂದ 2018-19ನೇ ಸಾಲಿಗೆ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿಯ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಗಂಗಾ ಕಲ್ಯಾಣ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಹಾಗೂ ಕನಿಷ್ಟ ಕಳೆದ 15 ವರ್ಷದಿಂದ ಕರ್ನಾಟಕ ರಾಜ್ಯದ ನಿವಾಸಿಯಾಗಿರ ಬೇಕು. ಅರ್ಜಿದಾರರು 18 ವರ್ಷದಿಂದ 60 ವರ್ಷದೊಳಗಿನ ವಯೋಮಾನದವರಾಗಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ ರೂ. 98 ಸಾವಿರ ಹಾಗೂ ನಗರ ಪ್ರದೇಶದವರಿಗೆ ರೂ. 1.20 ಲಕ್ಷ ಮಿತಿಯೊಳಗಿರಬೇಕು. ಅರ್ಜಿದಾರರ ಕುಟುಂಬದ ಯಾವದೇ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ನೌಕರಿಯಲ್ಲಿರಬಾರದು.
ಅರ್ಜಿದಾರರು ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವದೇ ಸೌಲಭ್ಯ ಪಡೆದಿರಬಾರದು. ಫಲಾಪೇಕ್ಷಿಯು ಸಣ್ಣ ಮತ್ತು ಅತಿ ಸಣ್ಣ ರೈತರಾಗಿರಬೇಕು. ಫಲಾನುಭವಿಯು 1 ಎಕರೆಯಿಂದ ಗರಿಷ್ಠ 5 ಎಕರೆ ಖುಷ್ಕಿ ಜಮೀನನ್ನು ಹೊಂದಿರಬೇಕು.
ಫಲಾಪೇಕ್ಷಿಯು ಅರ್ಜಿ ಯೊಂದಿಗೆ, ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರ, ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪತ್ರ, ಕುಟುಂಬದ ವಾರ್ಷಿಕ ವರಮಾನ ಪತ್ರದ ಜೆರಾಕ್ಸ್ ಪ್ರತಿ, ಚಾಲ್ತಿ ಆರ್.ಟಿ.ಸಿ., ಆಧಾರ್ ಕಾರ್ಡ್ ಪ್ರತಿ, ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ಲಗತ್ತಿಸಬೇಕು. ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ ಲಗತ್ತಿಸಬೇಕು.
ಗಂಗಾ ಕಲ್ಯಾಣ ಯೋಜನೆ ಯಡಿಯಲ್ಲಿ ಸೌಲಭ್ಯ ಪಡೆಯಲು ಜಿಲ್ಲಾ ಕಚೇರಿಯಿಂದ ಉಚಿತವಾಗಿ ಅರ್ಜಿ ಪಡೆದು ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ದ್ವಿ ಪ್ರತಿಯಲ್ಲಿ ತಾ. 31 ರವರೆಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ, ದೂ.ಸಂ: 08272-228857 ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.