ನಾಪೆÇೀಕ್ಲು, ಆ. 2: ವಿದ್ಯಾರ್ಥಿಗಳು ನಗರದೆಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದು, ಗ್ರಾಮೀಣ ಪ್ರದೇಶದ ಕಾಲೇಜುಗಳನ್ನು ಉಳಿಸಿಕೊಳ್ಳುವದೇ ದೊಡ್ಡ ಸವಾಲಾಗಿದೆ ಎಂದು ಕೊಡಗು ಜಿಲ್ಲಾ ಉಪವಿಭಾಗಾಧಿಕಾರಿ ನಂಜುಂಡೇಗೌಡ ಅಭಿಪ್ರಾಯಪಟ್ಟರು.

ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಆಯೋಜಿಸÀಲಾಗಿದ್ದ 2018-19 ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ಶೈಕ್ಷಣಿಕ ವಾತಾವರಣ, ಪರಿಸರ ಎಲ್ಲಾ ಕಾಲೇಜುಗಳಲ್ಲಿ ನಿರ್ಮಾಣವಾಗಬೇಕು. ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿ ಏನು ಎಂಬದರ ಬಗ್ಗೆ ಗಂಭೀರ ಚಿಂತನೆ ಮಾಡಬೇಕಾಗಿದೆ ಎಂದರು.

ಎನ್.ಎಸ್.ಎಸ್. ಘಟಕ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ ಈ ವರ್ಷದ ಅಂತಿಮ ಪದವಿ ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಗಾಯತ್ರಿ ಎಲ್ಲರಿಗೂ ಆದರ್ಶರಾಗಿದ್ದಾರೆ. ಪದವಿ ಶಿಕ್ಷಣ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನ ಅಂತಿಮ ಘಟ್ಟ ಇಲ್ಲಿ ಎಡವಿದರೆ ಗುರಿ ಮುಟ್ಟಲು ಸಾಧ್ಯವಿಲ್ಲ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜು ಪ್ರಾಂಶುಪಾಲೆ ಡಾ. ಕಾವೇರಿ ಪ್ರಕಾಶ್ ವಹಿಸಿದ್ದರು. ವೇದಿಕೆಯಲ್ಲಿ ಕುಂಡ್ಯೋಳಂಡ ರಮೇಶ ಮುದ್ದಯ್ಯ ಮತ್ತಿತರರು ಇದ್ದರು.

ವಿದ್ಯಾರ್ಥಿನಿ ಪಲ್ಲವಿ ಪ್ರಾರ್ಥನೆ. ಉಪನ್ಯಾಸಕರಾದ ಮುದ್ದಪ್ಪ ಸ್ವಾಗತಿಸಿ, ರಂಗಸ್ವಾಮಿ ನಿರೂಪಿಸಿದರೆ, ವಿದ್ಯಾರ್ಥಿನಿ ಫಾತಿಮಾ ವಂದಿಸಿದರು.

ಈ ಸಂದರ್ಭದಲ್ಲಿ ಅಂತಿಮ ಬಿ.ಕಾಂ ನಲ್ಲಿ ಮೂರು ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ಗಾಯತ್ರಿಯನ್ನು ಸನ್ಮಾನಿಸಲಾಯಿತು.