ಸೋಮವಾರಪೇಟೆ, ಆ. 2: ಮಡಿಕೇರಿ-ಸುಂಟಿಕೊಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬಸ್ ಚಾಲಕ ಪಾಲಾಕ್ಷ ಅವರ ಕುಟುಂಬಕ್ಕೆ ಇಲ್ಲಿನ ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದಿಂದ 1 ಲಕ್ಷ ರೂ.ಗಳ ಗುಂಪು ವಿಮೆಯನ್ನು ವಿತರಿಸಲಾಯಿತು.
ಇಲ್ಲಿನ ಪತ್ರಿಕಾಭವನದಲ್ಲಿ ನಡೆದ ಸಂಘದ ಮಾಸಿಕ ಸಭೆಯಲ್ಲಿ ಪಾಲಾಕ್ಷ ಅವರ ಕುಟುಂಬಕ್ಕೆ ವಿಮಾ ಮೊತ್ತವನ್ನು ನೀಡಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸಿ.ಸಿ. ನಂದ, ಕಾರ್ಯದರ್ಶಿ ಬಾಲಕೃಷ್ಣ, ಪದಾಧಿಕಾರಿಗಳಾದ ಪ್ರಕಾಶ್, ಖಾದರ್, ಎ.ಪಿ. ವೀರರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.