ಕೂಡಿಗೆ, ಆ. 2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹೆಬ್ಬಾಲೆ ವಲಯದ ಬನಶಂಕರಿ ಸಭಾಂಗಣದಲ್ಲಿ ಪದಾಧಿಕಾರಿಗಳ ತರಬೇತಿಯನ್ನು ಬನಶಂಕರಿ ಸಭಾ ಭವನದ ಅಧ್ಯಕ್ಷ ರಾಮಪ್ಪ ಉದ್ಘಾಟಿಸಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಸಮಾಜಕ್ಕೆ ಸಂಬಂಧಿಸಿದಂತೆ ಅನುದಾನಗಳನ್ನು ನೀಡುತ್ತಿದೆ. ಪದಾಧಿಕಾರಿಗಳಿಗೆ ಸಮಾಜಸೇವೆ ಮಾಡೋ ಅವಕಾಶ ಸಿಕ್ಕಿದೆ ಅದನ್ನು ಒಳ್ಳೆ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳಿ ಎಂದರು.
ತಾಲೂಕಿನ ಯೋಜನಾಧಿಕಾರಿ ಪ್ರಕಾಶ್ ವೈ. ಒಕ್ಕೂಟದ ಪದಾಧಿಕಾರಿಗಳಿಗೆ ಆರ್ಥಿಕ ವರ್ಷದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಲಯದ ಮೇಲ್ವಿಚಾರಕ ವಿನೋದ್‍ಕುಮಾರ್ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧಾರ್ಮಿಕ ಕೇಂದ್ರಗಳ ಸ್ವಚ್ಛತೆ ಮಾಡುವ ಬಗ್ಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸೇವಾಪ್ರತಿನಿಧಿಗಳಾದ ಕಲ್ಪನಾ, ಲಕ್ಷ್ಮಿ, ಪ್ರಮೀಳಾ, ನಾಗವೇಣಿ, ಸಂಜೀವಿನಿ, ಸುಮಲತಾ, ಉಷಾ, ಮಂಜುಳಾ ಹಾಗೂ ಒಕ್ಕೂಟದ ಪದಾಧಿಕಾರಿಗಳು ಹಾಜರಿದ್ದರು.