ಕೂಡಿಗೆ, ಆ. 2: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡಗೊಟ್ಟ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವನಹಳ್ಳಿಯ ಪುನರ್ವಸತಿ ಕೇಂದ್ರದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರಿಗೆ ನೀಡಲು ಈಗಾಗಲೇ ಸರಕಾರ ಯೋಜನೆಯಂತೆ 250 ಮನೆಗಳು ಸಿದ್ಧಗೊಂಡಿವೆ.

ಈ ಎರಡು ಕೇಂದ್ರಗಳಲ್ಲಿ ನಿರ್ಮಾಣವಾಗಿರುವ ಮನೆಗಳಿಗೆ ಬೇಕಾಗುವಂತಹ ಸೌಲಭ್ಯಗಳನ್ನು ಅಳವಡಿಸಲು ಎಲ್ಲಾ ಸಿದ್ಧತೆಗಳು ನಡೆದಿವೆ. ಈ ತಿಂಗಳ ಅಂತ್ಯದೊಳಗೆ ಬ್ಯಾಡಗೊಟ್ಟ ಮತ್ತು ಬಸವನಹಳ್ಳಿಯಲ್ಲಿ ತಾತ್ಕಾಲಿಕ ಮನೆಗಳಲ್ಲಿ ನೆಲೆಸಿರುವ 250 ಕುಟುಂಬದವರಿಗೆ ಮನೆಗಳನ್ನು ಹಸ್ತಾಂತರಿಸಲು ತಯಾರಿಗಳು ಭರದಿಂದ ಸಾಗುತ್ತಿದೆ.