ಮಡಿಕೇರಿ, ಆ. 2: ಬಾಳೆಲೆ ಗ್ರಾಮ ಪಂಚಾಯಿತಿಯ ಗ್ರಾಮ ಸಭೆಯನ್ನು ಜು. 31 ರಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಾಂಡೇರ ಕುಸುಮ ಶೇಖರ್ ಅವರ ಅಧ್ಯಕ್ಷತೆಯಲ್ಲಿ, ನೋಡೆಲ್ ಅಧಿಕಾರಿ ಗಣೇಶ್ ಕುಮಾರ್‍ರವರ ಸಮ್ಮುಖದಲ್ಲಿ ನಡೆದಲಾಯಿತು. ಗ್ರಾಮ ಸಭೆಗೆ ವಿವಿಧ ಇಲಾಖೆಯ ಅಧಿಕಾರಿಗಳು ಆಗಮಿಸಿ ತಮ್ಮ ಇಲಾಖೆಯ ಸವಲತ್ತುಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸಾರ್ವಜನಿಕರು ಗುಂಡಿಬಿದ್ದ ರಸ್ತೆಗಳ ಬಗ್ಗೆ, ನೀರಿನ ಸಮಸ್ಯೆ, ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಯ ಕೊರತೆ ಇರುವ ಬಗ್ಗೆ ಚರ್ಚಿಸಲಾಯಿತು.