ಸುಂಟಿಕೊಪ್ಪ, ಆ. 2: ಬೈಕ್ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‍ನಲ್ಲಿ ತೆರಳುತ್ತಿದ್ದ ಈರ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಇಲ್ಲಿಗೆ ಸಮೀಪದ ಬಾಳೆಕಾಡು ತಿರುವಿನಲ್ಲಿ ಗುರುವಾರ ಬೆಳಿಗ್ಗೆ ಸುಂಟಿಕೊಪ್ಪದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ (ಕೆಎ 09 ವೈ 1725) ಹಾಗೂ ಮಂಗಳೂರಿನಿಂದ ಸುಂಟಿಕೊಪ್ಪ ಕಡೆಗೆ ಆಗಮಿಸುತ್ತಿದ್ದ ಮಾರುತಿ ಕಾರು (ಕೆಎ19 ಎಂಎ 4827) ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಬೈಕ್ ಸವಾರ ಗಣಿ (42), ಆತನ ಪುತ್ರಿ ಪರಿಣಿತ (9) ಇಬ್ಬರಿಗೂ ಗಂಭೀರ ಗಾಯಗೊಂಡು ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ.

ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.