ಕೊಡಗಿನ ಪ್ರವಾಸೋದ್ಯಮ ಪ್ರಸ್ತಾಪ ಹೊಟೇಲ್ ಉದ್ಯಮದ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಅಗತ್ಯವಿರುವ ಎಲ್ಲ ಕ್ರಮ ಕೈಗೊಳ್ಳಲು ಹೆಚ್.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಪ್ರವಾಸೋದ್ಯಮದ ಕುರಿತು ಆಸಕ್ತಿ ವ್ಯಕ್ತಪಡಿಸಿದ ಮುಖ್ಯಮಂತ್ರಿಯವರು, ಪ್ರವಾಸೋದ್ಯಮ ಬೆಳವಣಿಗೆಯಲ್ಲಿ ಕೊಡಗು ಜಿಲ್ಲೆಯನ್ನು ಪರಿಗಣಿಸಿದ್ದು ವಿಶೇಷವಾಗಿತ್ತು.ಕರ್ನಾಟಕ ಪ್ರದೇಶ ಹೊಟೇಲ್ ಮತ್ತು ಉಪಹಾರ ಮಂದಿರಗಳ ಸಂಘದ ಪದಾಧಿಕಾರಿಗಳೊಂದಿಗೆ ಇಂದು ತಮ್ಮ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಚರ್ಚಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ಹೊಟೇಲ್ ಉದ್ಯಮವಲ್ಲದೆ ಪ್ರವಾಸೋದ್ಯಮಕ್ಕೂ ವಿಪುಲ ಅವಕಾಶಗಳಿವೆ. ಸಾಂಸ್ಕøತಿಕ ರಾಜಧಾನಿ ಎನಿಸಿರುವ ಮೈಸೂರು, ವಾಣಿಜ್ಯ ಕೇಂದ್ರವೆನಿಸಿದ ಹುಬ್ಬಳ್ಳಿ, ಕರಾವಳಿಯ ಮಂಗಳೂರು-ಉಡುಪಿ, ಮಲೆನಾಡಿನ ಶಿವಮೊಗ್ಗ, ಘಟ್ಟ ಪ್ರದೇಶವಾದ ಕೊಡಗೂ ಸೇರಿದಂತೆ, ಉತ್ತರ ಕರ್ನಾಟಕದ ಬೆಳಗಾವಿ,

ಹೊಟೇಲ್ ಉದ್ಯಮಕ್ಕೆ ಪ್ರೋತ್ಸಾಹ: ಮುಖ್ಯಮಂತಿ

(ಮೊದಲ ಪುಟದಿಂದ) ಬೀದರ್, ಗುಲ್ಬರ್ಗ ಮತ್ತಿತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಅನೇಕ ಪ್ರವಾಸಿ, ಐತಿಹಾಸಿಕ ಮತ್ತು ಧಾರ್ಮಿಕ ಪ್ರೇಕ್ಷಣೀಯ ಸ್ಥಳಗಳಿವೆ. ಇವುಗಳ ಅಭಿವೃದ್ಧಿಯನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಸೂಚನೆ ನೀಡಿದರು.

ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ಸುತ್ತಲಿನ ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಉತ್ತಮ ರಸ್ತೆ, ಪ್ರಯಾಣ ಮತ್ತು ವಸತಿಗೆ ಉತ್ತಮ ವ್ಯವಸ್ಥೆ, ಗೈಡ್‍ಗಳ ನೇಮಕ ಮುಂತಾದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಮತ್ತು ಸೂಕ್ತ ಮಾಹಿತಿಯನ್ನು ಪ್ರವಾಸಿಗರಿಗೆ ನೀಡುವ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು.

ಹೊಟೇಲ್‍ಗಳ ಪರವಾನಗಿ ನವೀಕರಣ ಹಾಗೂ ಬೆಂಗಳೂರು ನಗರದ ವಸತಿ ಬಡಾವಣೆಗಳ ಹೊಟೇಲ್‍ಗಳ ಪರವಾನಗಿ ನವೀಕರಣ ಸರಳೀಕರಿಸುವ ಬಗ್ಗೆ ಪರಿಶೀಲಿಸುವದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು. ಸಭೆಯಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಸುಬ್ರಮಣ್ಯಂ ಉಪಸ್ಥಿತರಿದ್ದರು.