ಗೋಣಿಕೊಪ್ಪಲು, ಆ. 3: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿರುವ ರಾಜ್ಯ ಪ್ರವಾಸೋದ್ಯಮ ಮತ್ತು ರೇಷ್ಮೆ ಖಾತೆಯ ಸಚಿವ ಸಾ.ರಾ. ಮಹೇಶ್ ಅವರನ್ನು ಜೆಡಿಎಸ್‍ನ ಮುಖಂಡ ಮೇರಿಯಂಡ ಸಂಕೇತ್ ಪೂವಯ್ಯ ನೇತೃತ್ವದಲ್ಲಿ ಕೊಡಗಿನ ಗಡಿ ಭಾಗ ಕೊಪ್ಪ ಗೇಟ್ ಬಳಿ ಸ್ವಾಗತಿಸಲಾಯಿತು.
ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್‍ನ ಪ್ರಚಾರ ಸಮಿತಿಯ ಅಧ್ಯಕ್ಷ ಕೆ.ಎಂ.ಬಿ. ಗಣೇಶ್, ರಾಜ್ಯ ಉಪಾಧ್ಯಕ್ಷ ಎಂ.ಎಂ. ಶರೀಫ್, ಕೊಡಗು ಜಿಲ್ಲಾ ವಕ್ತಾರ ಶನಿವಾರಸಂತೆ ಹೋಬಳಿಯ ಅಧ್ಯಕ್ಷ ಅದೀಲ್ ಪಾಷ, ಮಡಿಕೇರಿ ಕ್ಷೇತ್ರದ ಹಿಂದುಳಿದ ವರ್ಗದ ಅಧ್ಯಕ್ಷ ಎನ್.ಸಿ. ಸುನಿಲ್, ಜಿಲ್ಲಾ ಯುವ ಜನತಾ ದಳದ ಪ್ರಧಾನ ಕಾರ್ಯದರ್ಶಿ ಕೆ.ಜಿ. ಜಾಸೀರ್, ಜಿಲ್ಲಾ ಹಿರಿಯ ಉಪಾಧ್ಯಕ್ಷ ಡಿ.ಪಿ. ಬೋಜಪ್ಪ, ಸೋಮವಾರಪೇಟೆ ತಾಲೂಕು ಕಾರ್ಯದರ್ಶಿ ತೀರ್ಥನಂದಾ, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಜನತಾದಳದ ಅಧ್ಯಕ್ಷ ಅಮ್ಮಂಡ ವಿವೇಕ್, ವೀರಾಜಪೇಟೆ ನಗರ ಅಧ್ಯಕ್ಷ ಪಿ.ಎ.ಮಂಜುನಾಥ್, ಮಡಿಕೇರಿ ನಗರ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಎನ್.ಎ. ಇಬ್ರಾಹಿಂ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.