ಮಡಿಕೇರಿ, ಆ. 3: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೈಸೂರು-ಕೊಡಗು ಲೋಕಸಭಾ ಸಂಸದ ಪ್ರತಾಪ್ ಸಿಂಹ ಅವರ 4 ವರ್ಷದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದರು . ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅನಂತ್ ಕುಮಾರ್ ಹಾಗೂ ಬೀದರ್ ಜಿಲ್ಲೆಯ ಸಂಸದ ಭಗವಾನ್ ಖೂಬಾ ಉಪಸ್ಥಿತರಿದ್ದರು.
ಮೈಸೂರು - ಕೊಡಗಿಗೆ 10 ಸಾವಿರ ಕೋಟಿಗೂ ಹೆಚ್ಚು ಅನುದಾನದ ಯೋಜನೆಗಳನ್ನು ಕೊಟ್ಟಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸಂಸದ ಪ್ರತಾಪ್ ಸಿಂಹ ಧನ್ಯವಾದ ಅರ್ಪಿಸಿದರು.