ಮಡಿಕೇರಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಂಡನಕೊಲ್ಲಿ ಶಾಲೆಗೆ ಬೆಂಗಳೂರಿನ ಅವಿರತ ಅನುಷ್ಠಾನ ಸಂಸ್ಥೆ ವತಿಯಿಂದ ಶ್ರೀಕಾಂತ್ ಅವರು 1 ರಿಂದ 7ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಉದಾರವಾಗಿ ನೀಡಿದ್ದಾರೆ.ಕೂಡಿಗೆ: ಕುಶಾಲನಗರ ರೋಟರಿ ಸಂಸ್ಥೆಯು ರಂಗಸಮುದ್ರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳು ಹಾಗೂ ಲೇಖನಿ ಸಾಮಗ್ರಿಗಳನ್ನು ವಿತರಣೆ ಮಾಡಿದೆ.
ರೋಟರಿ ಸಂಸ್ಥೆಯ ಅಧ್ಯಕ್ಷ ಜೇಕಬ್, ಸಂಸ್ಥೆಯ ಆರತಿ ಎ. ಶೆಟ್ಟಿ, ರಂಗಸ್ವಾಮಿ ಹಾಗೂ ಪ್ರೇಮ್‍ಚಂದ್ ಅವರು ಶಾಲೆಯ ವಿದ್ಯಾರ್ಥಿಗಳಿಗೆ ಲೇಖನಿ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ಕೆ. ಚಂದ್ರು, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ರಾಮಚಂದ್ರ, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.ನಾಪೋಕ್ಲು: ಸಮೀಪದ ಎಮ್ಮೆಮಾಡು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಲಾಯಿತು. ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಸಿ.ಹೆಚ್. ಮೊಯಿದು ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ 188 ವಿದ್ಯಾರ್ಥಿಗಳಿಗೆ ಶೂ ಮತ್ತು ಸಾಕ್ಸ್ ವಿತರಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯಿತಿ ಸದಸ್ಯ ಮಾಹಿನ್, ಎಸ್‍ಡಿಎಂಸಿ ಉಪಾಧ್ಯಕ್ಷೆ ಫಾತಿಮ, ಸದಸ್ಯ ಕಾಳೇರ ಖಾದರ್ ಹಾಜಿ, ಮುಖ್ಯ ಶಿಕ್ಷಕ ಸುಕ್ರು ದೇವೇಗೌಡ ಹಾಗೂ ಸಹ ಶಿಕ್ಷಕರು ಪಾಲ್ಗೊಂಡಿದ್ದರು.