ಸೋಮವಾರಪೇಟೆ, ಆ. 3: ಶ್ರೀನಾರಾಯಣ ಗುರು ಸೇವಾ ಸಮಿತಿ ಹಾಗೂ ತುಳುನಾಡು ಬಿಲ್ಲವ ಮಹಿಳಾ ಸಂಘದ ಆಶ್ರಯದಲ್ಲಿ ತಾ. 12 ರಂದು ಇಲ್ಲಿನ ಜಾನಕಿ ಕನ್ವೆನ್‍ಷನ್ ಸಭಾಂಗಣದಲ್ಲಿ 6ನೇ ವರ್ಷದ ಆಟಿ ಸಂಭ್ರಮೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಬಿ.ಎ. ಭಾಸ್ಕರ್ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮುದಾಯ ಬಾಂಧವರು ಹಾಗೂ ಯುವ ಜನಾಂಗದಲ್ಲಿ ಸಂಸ್ಕøತಿ, ಆಚಾರ ವಿಚಾರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಟಿ ಸಂಭ್ರಮೋತ್ಸವ ಆಯೋಜಿಸಲಾಗಿದ್ದು, ಮಕ್ಕಳಿಂದ ವಯಸ್ಕರವರೆಗೆ ಸಾಂಸ್ಕøತಿಕ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ನಡೆಸಲಾಗು ವದು ಎಂದು ಮಾಹಿತಿ ನೀಡಿದರು.

ಅಂದು ಬೆಳಿಗ್ಗೆ 9.30 ಗಂಟೆಗೆ ಕಾರ್ಯಕ್ರಮವನ್ನು ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಟಿ. ರವಿ ಉದ್ಘಾಟಿಸಲಿದ್ದಾರೆ. ನಂತರ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ಹಗ್ಗಜಗ್ಗಾಟ ಸ್ಪರ್ಧೆ ನಡೆಯಲಿದೆ. ಮಧ್ಯಾಹ್ನ ಆಟಿ ದಿನಗಳ ವಿಶೇಷ ಖಾದ್ಯಗಳನ್ನು ಉಣಬಡಿಸಲಾಗುವದು ಎಂದು ಭಾಸ್ಕರ್ ತಿಳಿಸಿದರು.

ಅಪರಾಹ್ನ 2.30 ಗಂಟೆಗೆ ನಡೆಯುವ ಸಮಾರೋಪ ಸಮಾರಂಭವನ್ನು ಸಮಿತಿಯ ಗೌರವಾಧ್ಯಕ್ಷ, ಉದ್ಯಮಿ ಸಿ. ಲಕ್ಷ್ಮಣ್ ಪೂಜಾರಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿ ಗಳಾದ ಬಿ.ಎಸ್. ಸುಂದರ್, ಶ್ರೀಧರ್, ಸದಾನಂದ್, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ, ಜಿಲ್ಲಾ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಆನಂದ್ ರಘು, ತಾಲೂಕು ಸಮಿತಿ ಮಾಜಿ ಅಧ್ಯಕ್ಷ ರಮೇಶ್, ಚೌಡ್ಲು ಗ್ರಾ.ಪಂ. ಅಧ್ಯಕ್ಷೆ ವನಜ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.

ಸಂಘದ ಕಚೇರಿಗೆ ಉಚಿತವಾಗಿ ಕೊಠಡಿ ಒದಗಿಸಿದ ದೇವಿ ಕಾಂಪ್ಲೆಕ್ಸ್‍ನ ಮಾಲೀಕ ಬಿ. ಸಂಜೀವ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗು ವದು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಎಸ್.ಕೆ. ಸುಂದರ್, ಪ್ರಧಾನ ಕಾರ್ಯದರ್ಶಿ ಇಂದಿರಾ ರಮೇಶ್, ಸಹ ಕಾರ್ಯದರ್ಶಿ ಇಂದಿರಾ ಮೋಣಪ್ಪ, ಖಜಾಂಚಿ ಎಂ.ಜಿ. ರಮೇಶ್ ಅವರುಗಳು ಉಪಸ್ಥಿತರಿದ್ದರು.