ಕೂಡಿಗೆ, ಆ. 3: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಬ್ಯಾಡ್‍ಗೋಟ ಗ್ರಾಮದಲ್ಲಿರುವ ನಿರಾಶ್ರಿತರ ಕೇಂದ್ರದಲ್ಲಿ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಬಸವನಹಳ್ಳಿ ಗಿರಿಜನ ಸಹಕಾರ ಸಂಘದಿಂದ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಎಸ್.ಎನ್. ರಾಜಾರಾವ್ ತಿಳಿಸಿದ್ದಾರೆ.
ಸಂಘದ ಮಾಸಿಕ ಸಭೆಯಲ್ಲಿ ನಡೆದ ತೀರ್ಮಾನದ ಅನುಗುಣವಾಗಿ ಗಿರಿಜನರಿಗೆ ಸರಕಾರ ಪಡಿತರ ವಸ್ತುಗಳು ಸಮರ್ಪಕವಾಗಿ ಸಿಗುವಂತೆ ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.