ಸೋಮವಾರಪೇಟೆ, ಆ.3: ಇಲ್ಲಿನ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವನ್ನು ಸ್ಥಾಪಿಸುವ ಉದ್ದೇಶದಿಂದ ತಾ. 8ರಂದು ಮಧ್ಯಾಹ್ನ 2.30ಗಂಟೆಗೆ ಚನ್ನಬಸಪ್ಪ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಪದವೀಧರ ಮುಖ್ಯ ಶಿಕ್ಷಕರಾದ ಅಣ್ಣಮ್ಮ ತಿಳಿಸಿದ್ದಾರೆ.

ಸದರಿ ಶಾಲೆಯಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಸಭೆಗೆ ಹಾಜರಾಗಿ, ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಆಡಳಿತ ಮಂಡಳಿಯ ರಚನೆಗೆ ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.