ಕುಶಾಲನಗರ, ಆ. 3: ಕುಶಾಲನಗರ ಪಟ್ಟಣ ಪಂಚಾಯಿತಿಯಲ್ಲಿ ಪೌರ ಕಾರ್ಮಿಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಹೆಚ್.ಆರ್. ರಂಗಸ್ವಾಮಿ ಅವರನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗಸ್ವಾಮಿ ದಂಪತಿಗಳನ್ನು ಸನ್ಮಾನಿಸಿ, ಬೀಳ್ಕೊಡಲಾಯಿತು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ಕೆ.ಆರ್. ರೇಣುಕಾ, ಸದಸ್ಯರಾದ ಹೆಚ್.ಜೆ. ಕರಿಯಪ್ಪ, ಕವಿತಾ, ಸುರಯ್ಯಭಾನು, ಹೆಚ್.ಡಿ. ಚಂದ್ರು, ಮಧುಸೂದನ್, ಮುಖ್ಯಾಧಿಕಾರಿ ಎ.ಎಂ. ಶ್ರೀಧರ್, ನೌಕರರು, ಸಿಬ್ಬಂದಿಗಳು ಇದ್ದರು.