ಮಡಿಕೇರಿ, ಆ. 3 :ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ವಿದ್ಯಾರ್ಥಿ ಸಂಘ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಚಾಲನೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ನಂತರ ಮಾತನಾಡಿದ ಶಾಸಕರು ಸವಲತ್ತುಗಳ ಕೊರತೆ ಬಗ್ಗೆ ಚಿಂತನೆ ಮಾಡದೆ ಓದಿನ ಕಡೆಗೆ ವಿಶೇಷ ಗಮನ ಹರಿಸುವಂತೆ ಎಂ.ಪಿ .ಅಪ್ಪಚ್ಚುರಂಜನ್ ಅವರು ಸಲಹೆ ಮಾಡಿದರು.

ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಜಾಗ ಗುರುತಿಸಲಾಗಿದ್ದು, ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಓದಿನ ಜೊತೆಗೆ ಸಮಾಜದ ಆಗುಹೋಗುಗಳ, ಪ್ರಚಲಿತ ವಿದ್ಯಾಮಾನಗಳನ್ನು ತಿಳಿದು ಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು.

ವಿದ್ಯಾರ್ಥಿಗಳು ಓದಿನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಂತಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದು ಉದ್ಯೋಗ ಪಡೆಯುವಂತಾಗಬೇಕು ಎಂದು ಅವರು ಹೇಳಿದರು.

ಪ್ರಾಂಶುಪಾಲೆ ಜೆನಿಫರ್ ಲೋಲಿಟ, ನಾಪೋಕ್ಲು ಕಾಲೇಜಿನ ಉಪನ್ಯಾಸಕಿ ಕಾವೇರಿ, ಉಪನ್ಯಾಸಕ ರಾದ ಮಹೇಶ್, ಸರಸ್ವತಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ದಾಮೋದರ, ಸುಕೇಶ್ ಚಂಗಪ್ಪ, ಥಾಮಸ್, ನಿವೃತ್ತ ಪ್ರಾಂಶುಪಾಲೆ ಭಾಗೀರಥಿ ಇತರರು ಇದ್ದರು.