ಮಡಿಕೇರಿ, ಆ. 3 : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಪಠ್ಯೇತರ ಹಾಗೂ ಸಹ ಪಠ್ಯ ಚಟುವಟಿಕೆಗಳಿಗೆ ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನೀಲ್ ಸುಬ್ರಮಣಿ ಅವರು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಸುನೀಲ್ ಸುಬ್ರಮಣಿ ಅವರು ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಮೊಬೈಲ್ ಅಂತರ್ಜಾಲ ವನ್ನು ಎಷ್ಟು ಬೇಕು ಅಷ್ಟು ಬಳಸುವಂತಾಗಬೇಕು. ವಿದ್ಯಾರ್ಥಿಗಳು ಕಾಲೇಜಿಗೆ ಕೀರ್ತಿ ತರುವಂತಾಗಬೇಕು. ಬೆಂಗಳೂರು ನ್ಯಾಷನಲ್ ಕಾಲೇಜಿನ ಅಧ್ಯಕ್ಷರಾದ ಎಚ್.ನರಸಿಂಹಯ್ಯ ಅವರ ಆದರ್ಶಗಳನ್ನು ತಿಳಿದುಕೊಳ್ಳು ವಂತಾಗಬೇಕು ಎಂದು ಅವರು ಹೇಳಿದರು.

ಕಾವೇರಿ ಭೂಮಿಯಲ್ಲಿ ಹುಟ್ಟಿದ ವಿದ್ಯಾರ್ಥಿಗಳು ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಜನರಲ್ ತಿಮ್ಮಯ್ಯ ಅವರುಗಳ ತತ್ವಗಳನ್ನು, ಆದರ್ಶಗಳನ್ನು ತಿಳಿದುಕೊಂಡು ಅವರಂತೆ ನಾಡಿನಲ್ಲಿ ಒಳ್ಳೆಯ ಹೆಸರು ಪಡೆಯುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆÀ ವೈ. ಚಿತ್ರಾ, ನಿವೃತ್ತ ಪ್ರಾಂಶುಪಾಲೆ ಶಾಂತಲಕ್ಷ್ಮಿ ಇತರರು ಇದ್ದರು.