ಬೆಂಗಳೂರು, ಆ. 4: ರಾಜ್ಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ನಿರ್ದೇಶಕರಾಗಿದ್ದ ಎನ್.ಆರ್. ವಿಶುಕುಮಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿರ್ದೇಶಕರು, ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹುದ್ದೆಗೆ ವರ್ಗಾಯಿಸಿ ನೇಮಿಸಲಾಗಿದೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ನಿರ್ದೇಶಕರ ಹುದ್ದೆಯಲ್ಲಿ ಸಮವರ್ತಿತ ಪ್ರಬಾರದಲ್ಲಿರಿಸಲಾಗಿದೆ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಪೊಲೀಸ್ ಸೇವೆಯ ಅಧಿಕಾರಿಯಾದ ಡಾ. ಪಿ.ಎಸ್. ಹರ್ಷ ಅವರನ್ನು ಅವರ ಮಾತೃ ಇಲಾಖೆಗೆ ಹಿಂದಿರುಗಿಸಿದೆ.